ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ವಿಷಯವನ್ನು ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲನೆ ನಡೆಸಿದರು.
ಬೆಂಗಳೂರಿನ ಹೃದಯ ಭಾಗದ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯಲ್ಲಿನ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ.
ತಮಿಳು ಭಾಷೆಯಲ್ಲಿ ಇ-ಮೇಲ್ ನಲ್ಲಿ ಬಾಂಬ್ ಬೆದರಿಕೆಯನ್ನು ಹಾಕಿರುವುದಾಗಿ ಹೇಳಲಾಗುತ್ತಿದೆ.
ಈ ವಿಷಯವನ್ನು ಪೊಲೀಸರಿಗೆ ಕೋರ್ಟ್ ಸಿಬ್ಬಂದಿ ತಿಳಿಸಿದ್ದರು. ಹೀಗಾಗಿ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋರ್ಟ್ ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ತಪಾಸಣೆ ನಡೆಸುತ್ತಿದ್ದಾರೆ.