2026-03-07 06:00:58

Bomb Threat To Italian Embassy in Bengaluru | ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ | Speed News Kannada

Bomb Threat To Italian Embassy in Bengaluru | ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ | Speed News Kannada

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೆ ಬಾಂಬ್‌ ಬೆದರಿಕೆಯ ಸದ್ದು ಕೇಳಿ ಬರುತ್ತಿದೆ. ರಾಷ್ಟ್ರಾದ್ಯಂತ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಒಡ್ಡಲಾಗಿದೆ.
ಅನಾಮಧೇಯ ವ್ಯಕ್ತಿ ಜನವರಿ 30ರಂದು ಬಾಂಬ್‌ ಬೆದರಿಕೆ ಹಾಕುವುದಾಗಿ ಇ-ಮೇಲ್‌ನಲ್ಲಿ ಹುಸಿ ಬೆದರಿಕೆ ಹಾಕಿದ್ದ. ಇಟಲಿಯ ಕಾನ್ಸುಲ್ ಜನರಲ್ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಮಾಡಿದ್ದಾನೆ. 
ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ.  ಕಚೇರಿಯ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಕಚೇರಿ ಮತ್ತು ಕಚೇರಿಯ ಸುತ್ತಮುತ್ತ ಶೋಧ ಕಾರ್ಯ ಮುಂದುವರಿಸಿದರು.
ಈ ಪ್ರಕರಣದ ಕುರಿತು ಇಟಾಲಿಯನ್ ಕಾನ್ಸುಲೇಟ್‌ನ ಸೆಕ್ಯೂರಿಟಿ ಮ್ಯಾನೇಜರ್ ಜಿಯೋಡೊಮೆನಿಕ್ ಒ ಮಿಲಾನೋ ಎಂಬವರು ಹಲಸೂರು ಪೊಲೀಸರಿಗೆ ದೂರು ನೀಡಿದ್ದಾರೆ. ಹಲಸೂರು ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡು ಬಾಂಬ್‌ ಬೆದರಿಕೆ ಹಾಕಿದ ಆರೋಪಿಗಾಗಿ ಶೋಧ ಕಾರ್ಯ  ಮುಂದುವರೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.