2026-07-23 10:24:58

Borewells dry up due to hot temperatures, causing severe water shortage |ಬಿಸಿಲಿನ ತಾಪಮಾನದಿಂದ ಬೋರ್‌ವೆಲ್‌ಗಳು ಬತ್ತಿ ಭೀಕರ ಜಲಕ್ಷಾಮ|Speed News Kannada

Borewells dry up due to hot temperatures, causing severe water shortage |ಬಿಸಿಲಿನ ತಾಪಮಾನದಿಂದ ಬೋರ್‌ವೆಲ್‌ಗಳು ಬತ್ತಿ ಭೀಕರ ಜಲಕ್ಷಾಮ|Speed News Kannada

ರಾಜ್ಯದ ಒಟ್ಟು 1.23 ಲಕ್ಷ ಬೋರ್‌ವೆಲ್‌ಗಳ ಪೈಕಿ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ.ರಾಯಚೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನೀರಿನ ಹಾಹಾಕಾರ ಅತಿ ಹೆಚ್ಚು.ಬೆಂಗಳೂರು ನಗರ ಮತ್ತು ಗ್ರಾಮಾಂತರದ ಹಲವು ಪಂಚಾಯತ್‌ಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ.ಜಿಲ್ಲೆಯ 1,128 ಗ್ರಾಮಗಳ ಪೈಕಿ 708 ಗ್ರಾಮಗಳು ಬೋರ್‌ವೆಲ್ ಅವಲಂಬಿತವಾಗಿದ್ದು, ಉತ್ಪಾದನೆ ಕುಂಠಿತಗೊಂಡಿದೆ.

ರಾಜ್ಯದಲ್ಲಿ ಬಿಸಿಲಿನ ಅಬ್ಬರಕ್ಕೆ ಜಲಮೂಲಗಳು ಬತ್ತುತ್ತಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಂಕಿಅಂಶಗಳ ಪ್ರಕಾರ ತುಮಕೂರು, ವಿಜಯಪುರ, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಸಂಖ್ಯೆ ಈ ಬಾರಿ ತುಸು ಕಡಿಮೆ ಇದೆ. ಮೈಸೂರು ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಮತ್ತು ಬಹುಗ್ರಾಮ ನೀರಿನ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನದಿ ನೀರು ಪೂರೈಕೆಯ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.