ಬೆಂಗಳೂರು: ಮೂರ್ಛೆ ರೋಗ, ಮರೆವಿನ ಕಾಯಿಲೆ, ಪಾರ್ಶ್ವವಾಯು ಮತ್ತು ತಲೆನೋವಿನಂತಹ ನರವೈಜ್ಞಾನಿಕ ಕಾಯಿಲೆಗಳ ತಡೆ, ಆರಂಭಿಕ ಪತ್ತೆ ಹಾಗೂ ಸಮಗ್ರ ಚಿಕಿತ್ಸೆ ಎಂಬ ಗುರಿಯನ್ನು ಇಟ್ಟುಕೊಂಡು ರಾಜ್ಯ ಸರ್ಕಾರ Karnataka Brain Health Initiative (KaBHI) ಯೋಜನೆಯನ್ನು NIMHANS ತಾಂತ್ರಿಕ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಆರಂಭಿಸಿದೆ. ಈ ಯೋಜನೆಯ ಅನ್ವಯ ರಾಜ್ಯದ 33 ಜಿಲ್ಲಾ ಆಸ್ಪತ್ರೆಗಳಲ್ಲಿ ಮಿದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾ ಆಸ್ಪತ್ರೆಗಳಲ್ಲಿ ಬ್ರೈನ್ ಹೆಲ್ತ್ ಕ್ಲಿನಿಕ್ ಸ್ಥಾಪನೆ, ವೈದ್ಯರಿಗೆ ತರಬೇತಿ ಹಾಗೂ ಗ್ರಾಮೀಣ ಮಟ್ಟದಲ್ಲಿಯೇ ನರ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ ತಲುಪಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
2024ರ ಏಪ್ರಿಲ್‌ನಿಂದ 2025ರ ಡಿಸೆಂಬರ್ ವರೆಗೆ ಒಟ್ಟು ಸುಮಾರು 4.71 ಲಕ್ಷಕ್ಕೂ ಅಧಿಕ ತಪಾಸಣೆ ನಡೆಸಲಾಗಿದ್ದು, ಸುಮಾರು 1.95 ಲಕ್ಷ ನರರೋಗಿಗಳಿಗೆ ಚಿಕಿತ್ಸೆ ಒದಗಿಸಲಾಗಿದೆ. ಇದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಮಿದುಳು ಆರೋಗ್ಯ ಸೇವೆ ವಿಸ್ತರಣೆಗೆ ಮಹತ್ವದ ಸಾಧನೆಯಾಗಿದೆ.
ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಿ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಬ್ರೈನ್ ಹೆಲ್ತ್ ಸೇವೆ ತಲುಪಿಸುವ ಬದ್ಧತೆಯೊಂದಿಗೆ ನಮ್ಮ ಸರ್ಕಾರ ಈ ಯೋಜನೆಯನ್ನು ಮುಂದುವರಿಸುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದಿದ್ದಾರೆ.