2026-06-08 03:55:31

Break in Iran V/S US war|ಇರಾನ್‌ V/S ಅಮೆರಿಕ ಯುದ್ಧಕ್ಕೆ ಬ್ರೇಕ್.. 5 ದಿನದ ಕದನ ವಿರಾಮ ಘೋಷಿಸಿದ ಟ್ರಂಪ್|Speed news kannada

Break in Iran V/S US war|ಇರಾನ್‌ V/S ಅಮೆರಿಕ ಯುದ್ಧಕ್ಕೆ ಬ್ರೇಕ್.. 5 ದಿನದ ಕದನ ವಿರಾಮ ಘೋಷಿಸಿದ ಟ್ರಂಪ್|Speed news kannada

ಇರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್‌ ನಡುವೆ ಯುದ್ಧ ಶುರುವಾಗಿ 24 ದಿನಗಳಾಗಿವೆ. ಕಳೆದ ಕೆಲವು ದಿನಗಳಿಂದ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದ್ದ ಇರಾನಿಗೆ ಟ್ರಂಪ್ ಕಠಿಣ ಗಡುವು ನೀಡಿದ್ದರು. "ಮುಂದಿನ 48 ಗಂಟೆಗಳ ಒಳಗೆ ಜಲಸಂಧಿಯನ್ನು ತೆರೆಯದಿದ್ದರೆ, ನಿಮ್ಮ ದೇಶದ ಅತಿದೊಡ್ಡ ವಿದ್ಯುತ್ ಸ್ಥಾವರಗಳನ್ನು ಧ್ವಂಸ ಮಾಡಲಾಗುವುದು" ಎಂದು ಟ್ರಂಪ್ ಎಚ್ಚರಿಕೆಯನ್ನು ನೀಡಿದ್ದರು. ಅಮೆರಿಕದ ಎಚ್ಚರಿಕೆ ಬಗ್ಗದ ಇರಾನ್‌ ನಿತ್ಯ ಹೋರಾಟವನ್ನು ನಡೆಸುತ್ತಲೇ ಇತ್ತು. ಅಮೆರಿಕ ಮತ್ತು ಇರಾನ್‌ ನಡುವಿನ ಯುದ್ಧದ ಉದ್ವಿಗ್ನತೆಯನ್ನು ತಗ್ಗಿಸುವುದಕ್ಕಾಗಿ ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 5 ದಿನದ ಕದನ ವಿರಾಮವನ್ನು ಘೋಷಿಸಿದ್ದಾರೆ.

ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟ್ರೂತ್‌ ಸೋಶಿಯಲ್‌ ಮೂಲಕ ಅಧಿಕೃತವಾಗಿ 5 ದಿನಗಳ ಕದನ ವಿರಾಮವನ್ನು ಘೋಷಣೆಮಾಡಿದ್ದಾರೆ. ಈ ಅವಧಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯದ ವಿರುದ್ಧ ಯಾವುದೇ ಮತ್ತು ಎಲ್ಲಾ ಮಿಲಿಟರಿ ದಾಳಿಗಳನ್ನು ಮುಂದೂಡಲು ನಾನು ಯುದ್ಧ ಇಲಾಖೆಗೆ ಸೂಚಿಸಿದ್ದೇನೆ, ಇದು ನಡೆಯುತ್ತಿರುವ ಸಭೆಗಳು ಮತ್ತು ಚರ್ಚೆಗಳ ಯಶಸ್ಸಿಗೆ ಒಳಪಟ್ಟಿರುತ್ತದೆ" ಎಂದು ಘೋಷಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.