ಬೆಂಗಳೂರು: ಅಧಿಕಾರ ತ್ಯಾಗದ ಹೊಸ್ತಿಲಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸಹದ್ಯೋಗಿಗಳಿಗೆ ಉಪಹಾರ ಸಭೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು ಭಾಗಿಯಾಗಿದ್ದಾರೆ. ಸಭೆಯ ನಂತರ ಸ್ಪಷ್ಟ ಚಿತ್ರಣ ದೊರಕಲಿದೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಈ ಸಭೆ ನಡೆಯುತ್ತಿದೆ.
ಉಪಹಾರ ಕೂಟಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಆತ್ಮೀಯವಾಗಿ ಬರ ಮಾಡಿಕೊಂಡರು. ಈ ವೇಳೆ, ಶಿವಕುಮಾರ್ ಸಿದ್ದರಾಮಯ್ಯ ಪಾದ ಮುಟ್ಟಿ ನಮಸ್ಕರಿಸಿದರು.
ಉಪಹಾರಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ, ಸಿಎಂ ಸಿದ್ದರಾಮಯ್ಯ ಯಾವತ್ತು ರಾಜೀನಾಮೆ ನೀಡುತ್ತಾರೆ ಎನ್ನುವುದು ತಿಳಿದಿಲ್ಲ. ಹೈಕಮಾಂಡ್ ಜತೆ ನೇರವಾಗಿ ಮಾತನಾಡಿದ್ದಾರೆ. ನಮಗೇನೂ ತಿಳಿದಿಲ್ಲ ಎಂದರು.
ಆರ್ ಬಿ ತಿಮ್ಮಾಪುರ. ಎಂ.ಸಿ.ಸುಧಾಕರ್, ಜಮೀರ್ ಅಹಮದ್, ಬೈರತಿ ಸುರೇಶ್, ಸಂತೋಷ್ ಲಾಡ್. ಎಂ.ಬಿ.ಪಾಟೀಲ್ , ರಾಮಲಿಂಗಾರೆಡ್ಡಿ, ಎಸ್.ಎಸ್ ಮಲ್ಲಿಕಾರ್ಜುನ.ಶರಣಬಸಪ್ಪ, ಪರಮೇಶ್ವರ್, ಚಲುವರಾಯಸ್ವಾಮಿ, ಸತೀಶ್,ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ.