2026-06-25 02:06:41

Brother in law attacks student with stick while writing PUC exam | ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಮೇಲೆ ದೊಣ್ಣೆಯಿಂದ ಹಲ್ಲೆಗೈದ ಸೋದರ ಮಾವ | Speed News Kannada

Brother in law attacks student with stick while writing PUC exam | ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಮೇಲೆ ದೊಣ್ಣೆಯಿಂದ ಹಲ್ಲೆಗೈದ ಸೋದರ ಮಾವ | Speed News Kannada

ನಂಜನಗೂಡು : ನಂಜನಗೂಡಲ್ಲಿ ಹಳೇ ದ್ವೇಷದ ಹಿನ್ನೆಲೆ ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ.
ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಆಕೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸಂಬಂಧಿ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ.
ಪಿಯುಸಿ ಪರೀಕ್ಷೆ ಬರೆದಿದ್ದಕ್ಕೆ ದೊಣ್ಣೆಯಿಂದ ಹಲ್ಲೆಗೈದ ಸೋದರಮಾವ! ಪೂರ್ಣಿಮಾ ನೀನು ಓದಬಾರದು ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ. ಯುವತಿ ಪೂರ್ಣಿಮಾಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.