ಹೌದು ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರು ಚೆನ್ನೈ ಮಧ್ಯೆ ಹೈಸ್ಪೀಡ್ ರೈಲ್ವೆ ಕಾರಿಡಾರ್ ಘೋಷಣೆ ಮಾಡಲಾಗಿದೆ. ಅಲ್ಲದೆ, ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಒಟ್ಟು 7 ರೈಲ್ವೆ ಕಾರಿಡಾರ್‌ಗಳ ಘೋಷಣೆ ಮಾಡಲಾಗಿದೆ. ಯಾವೆಲ್ಲ ನಗರಗಳಿಗೆ ಹೈಸ್ಪೀಡ್ ರೈಲ್ವೆ ಕಾರಿಡಾರ್ ಸಂಪರ್ಕ ದೊರೆಯಲಿದೆ ಎಂದು ತಿಳಿಯಲು ಈ ಸ್ಟೋರಿ ನೋಡಿ....
ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಉದ್ದೇಶದಿಂದ ಚೆನ್ನೈ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ.
ಎಲ್ಲಿಂದ ಎಲ್ಲಿಗೆ.....??
ಈ ಯೋಜನೆಯಡಿ ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಹಾಗೂ ವಾರಾಣಸಿ–ಸಿಲಿಗುರಿ ನಡುವೆ ಹೈಸ್ಪೀಡ್ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳ ಮೂಲಕ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವುದು ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಿಂದ ಮಹಾನಗರಗಳು ಮತ್ತು ಪ್ರಮುಖ ಆರ್ಥಿಕ ಕೇಂದ್ರಗಳ ನಡುವೆ ಸಂಪರ್ಕ ಮತ್ತಷ್ಟು ಬಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಬಜೆಟ್ ಘೋಷಣೆಯ ಬೆನ್ನಲ್ಲೇ ಹೈಸ್ಪೀಡ್ ರೈಲು ಯೋಜನೆಗಳು ದೇಶದ ಸಾರಿಗೆ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಲಿವೆ ಎಂಬ ನಿರೀಕ್ಷೆ ಮೂಡಿದೆ.