2026-07-23 11:21:36

budget; 50,000 hoses in 2 years; Speed News Kannada

budget; 50,000 hoses in 2 years;  Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 17ನೇ ಬಜೆಟ್ ನಲ್ಲಿ ವಸತಿ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ.

ಕೆಎಚ್‌ಬಿ ವತಿಯಿಂದ “ನಮ್ಮ ಮನೆ” ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳು ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತೇವೆ ಎಂದಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

‘ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮ’ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತರರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡುವುದಾಗಿಯೂ ಅವರು ಪ್ರಕಟಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.