2026-06-08 01:23:03

Budget Preparation | ಬಜೆಟ್‌ ತಯಾರಿ ವಿವಿಧ ಇಲಾಖೆಗಳ ಸಚಿವರು ಅಧಿಕಾರಿಗಳ ಸಭ ಎನಡೆಸಿದ ಸಿಎಂ ಸಿದ್ದರಾಮಯ್ಯ | Speed News Kannada

Budget Preparation | ಬಜೆಟ್‌ ತಯಾರಿ ವಿವಿಧ ಇಲಾಖೆಗಳ ಸಚಿವರು ಅಧಿಕಾರಿಗಳ ಸಭ ಎನಡೆಸಿದ ಸಿಎಂ ಸಿದ್ದರಾಮಯ್ಯ | Speed News Kannada

ಬೆಂಗಳೂರು: 2026-27ನೇ ಸಾಲಿನ ಬಜೆಟ್‌ಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಇಂಧನ ಇಲಾಖೆ, ಯೋಜನೆ, ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಣ್ಣ ನೀರಾವರಿ, ಪೌರಾಡಳಿತ, ವಸತಿ ಮತ್ತು ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಇಲಾಖೆಯ ಅನುದಾನದ ಬೇಡಿಕೆ, ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಕಾರ್ಯಕ್ರಮದ ಮಾಹಿತಿ ಪಡೆದರು. 
ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರೂ ಆದ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.