2026-03-07 11:28:50

budget related to poor, women directly; hariprasadSpeed News Kannada

budget related to poor, women directly; hariprasadSpeed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026–27ನೇ ಸಾಲಿನ ಬಜೆಟ್ ಸಾಮಾಜಿಕ ನ್ಯಾಯದ ತತ್ವವನ್ನು ಪ್ರತಿಬಿಂಬಿಸುವ, ಹಿಂದುಳಿದ ಬಡವರು–ಮಧ್ಯಮ ವರ್ಗ ಯುವಜನರ ಹಾಗೂ ಮಹಿಳೆಯರ ಬದುಕಿಗೆ ನೇರವಾಗಿ ಸ್ಪಂದಿಸುವ ಜನಪರ ಬಜೆಟ್ ಆಗಿದೆ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದಿಂದ ರಾಜ್ಯದ ಅನುದಾನದಲ್ಲಿ ಕಡಿತ, ಜಿಎಸ್‌ಟಿ ಪರಿಹಾರದ ಕೊರತೆ ಮತ್ತು ರಾಜ್ಯಗಳ ಹಕ್ಕುಗಳಿಗೆ ನಿರಂತರ ಧಕ್ಕೆಯಾಗುತ್ತಿದೆ. ರಾಜ್ಯದಿಂದ ಸಂಗ್ರಹವಾಗುವ ತೆರಿಗೆಗಳಲ್ಲಿ ದೊಡ್ಡ ಪ್ರಮಾಣದ ಹಣವನ್ನು ಕೇಂದ್ರಕ್ಕೆ ನೀಡಲಾಗುತ್ತಿದರೂ, ಅದರ ಸಮಾನ ಹಂಚಿಕೆ ಕರ್ನಾಟಕಕ್ಕೆ ದೊರೆಯುತ್ತಿಲ್ಲ. ಕೇಂದ್ರದ ತಾರತಮ್ಯ ನೀತಿಗಳ ನಡುವೆಯೂ ಮುಖ್ಯಮಂತ್ರಿಗಳು ಸಮತೋಲನಯುತ ಮತ್ತು ಅಭಿವೃದ್ಧಿಮುಖಿ ಬಜೆಟ್ ಮಂಡಿಸಿರುವುದು ಅವರ ಆಡಳಿತದ ಸಾಮರ್ಥ್ಯವನ್ನು ತೋರಿಸುತ್ತದೆ.

ಗೃಹಲಕ್ಷ್ಮಿ ಯೋಜನೆಯಡಿ ಲಕ್ಷಾಂತರ ಮಹಿಳೆಯರಿಗೆ ತಿಂಗಳಿಗೆ ₹2000 ಆರ್ಥಿಕ ನೆರವು ದೊರೆಯುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗಿದೆ. ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಲಾಗಿದೆ. ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸುಮಾರು 80 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ನಿರ್ಧಾರ ಕೈಗೊಂಡಿರುವುದು ಯುವಕರಿಗೆ ದೊಡ್ಡ ನಿರೀಕ್ಷೆ ಮೂಡಿಸಿದೆ.

ವಿಶ್ವವಿದ್ಯಾಲಯಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ದೂರದೃಷ್ಟಿಯಿಂದ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ನಡೆಸಲು ಬಜೆಟ್‌ನಲ್ಲಿ ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ.  ವಿದ್ಯಾರ್ಥಿ ಸಂಘಗಳ ಚುನಾವಣೆಗಳು ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ ಸಾರ್ವಜನಿಕ ಜೀವನದ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ವೇದಿಕೆಯಾಗಿದೆ. ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಈ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪುನರಾರಂಭಿಸುವುದು ವಿದ್ಯಾರ್ಥಿಗಳ ಧ್ವನಿಗೆ ಅವಕಾಶ ನೀಡಿದಂತಾಗುತ್ತದೆ.  ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವ ವಾತಾವರಣ ನಿರ್ಮಾಣಕ್ಕೆ ಇದು ಸಹಕಾರಿ ಆಗಲಿದೆ.

ಈ ಬಜೆಟ್‌ನಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಮೂಲಸೌಕರ್ಯಗಳಿಗೆ ಮಹತ್ವದ ಆದ್ಯತೆ ನೀಡಲಾಗಿದೆ. ಜೊತೆಗೆ ಮಹಿಳಾ ಸಬಲೀಕರಣ, ಯುವಕರ ಉದ್ಯೋಗ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಇದು ಕೇವಲ ಅಂಕಿ–ಅಂಶಗಳ ಬಜೆಟ್ ಅಲ್ಲ; ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸುವ ಸಾಮಾಜಿಕ ನ್ಯಾಯದ ಬಜೆಟ್ ಆಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.