2026-06-08 01:29:18

Bus falls into river, 23 dead | ನೋಡನೋಡುತ್ತಲೇ ನದಿಗೆ ಬಿದ್ದ ಬಸ್‌, 23 ಜನ ಸಾವು | Speed news kannada

Bus falls into river, 23 dead | ನೋಡನೋಡುತ್ತಲೇ ನದಿಗೆ ಬಿದ್ದ ಬಸ್‌, 23 ಜನ ಸಾವು | Speed news kannada

ಬಾಂಗ್ಲಾದೇಶದ ದೌಲತ್ಡಿಯಾ ಘಾಟ್‌ನಲ್ಲಿ ಇದಕ್ಕಿದಂತೆ ಖಾಸಗಿ ಬಸ್‌ವೊಂದು ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಮಾರ್ಚ್‌ 25ರ ಬುಧವಾರ ಕೆಂಪಿ ಬಣ್ಣದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ನದಿಗೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಬೃಹತ್ ಸಾರಿಗೆ ಧೋಣಿ ಹತ್ತಲು ಬಸ್ ಪ್ರಯತ್ನಿಸುವಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನೂ ಈ ದುರಂತದಲ್ಲಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಸುಮಾರು 40 ಕ್ಕೂ ಹೆಚ್ಚು ಮಂದಿಯಲ್ಲಿ 23 ಜನ ಸಾವನಪ್ಪಿದ್ದಾರೆ. ಇನ್ನೂ 11 ಜನ ಪ್ರಯಾಣಿಕರು ಸುರಕ್ಷಿತವಾಗಿ ಈಜಿಕೊಂಡು ದಡಸೇರಿದ್ದಾರೆ. ಇನ್ನೂ ಉಳಿದ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಅಪಘಾತದ ನಂತರ ಆರಂಭದಲ್ಲಿ ಎರಡು ಶವಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ಬಳಿಕ 18 ಶವಗಳನ್ನು ಕಾರ್ಯಾಚರಣೆ ಮೂಲಕ ಮೇಲಕ್ಕೆ ಎತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.