2026-03-07 09:02:51

bus hit bike two children died on spot ಶಾಲಾ ಬಸ್‌ ಹರಿದು ಇಬ್ಬರು ಮಕ್ಕಳು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Speed News Kannada

bus hit bike two children died on spot ಶಾಲಾ ಬಸ್‌ ಹರಿದು ಇಬ್ಬರು ಮಕ್ಕಳು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ Speed News Kannada

ಬೆಂಗಳೂರು: ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಸಮೀಪ ನಡೆದಿದೆ. ವರ್ಷಾ (2) ಹಾಗೂ ಭಾನು (4) ಮೃತ ದುರ್ದೈವಿ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಮಕ್ಕಳು ಅಸುನೀಗಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್ ನಲ್ಲಿ ಪೊಲೀಸ್‌ ಹುದ್ದೆಯಲ್ಲಿದ್ದಾರೆ. ತಮ್ಮ ಪುತ್ರಿ ವರ್ಷಾ ಮತ್ತು ಅಣ್ಣನ ಮಗಳು ಭಾನು ಅವರನ್ನು ಬೈಕ್ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಎದುರಿನಲ್ಲಿ ಶಾಲಾ ಬಸ್‌ ಆಗಮಿಸುತ್ತಿತ್ತು. ಬಸ್ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು. ಯೂಟರ್ನ್ ತೆಗೆದುಕೊಳ್ಳುವಾಗ ಬಸ್‌ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೈಕ್ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಕ್ಕಳನ್ನ‌ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.  ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.