2026-03-07 04:55:31

BWSSB notice | ಖಾಸಗಿ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಏಜೆನ್ಸಿಗಳ ನೋಂದಣಿ ಕಡ್ಡಾಯ BWSSB ಸೂಚನೆ | Speed News Kannada

BWSSB notice | ಖಾಸಗಿ ಮ್ಯಾನ್‌ಹೋಲ್ ಸ್ವಚ್ಛಗೊಳಿಸುವ ಏಜೆನ್ಸಿಗಳ ನೋಂದಣಿ ಕಡ್ಡಾಯ BWSSB ಸೂಚನೆ | Speed News Kannada

ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಸಗಿ ಮ್ಯಾನ್‌ಹೋಲ್ ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (STP) ಸ್ವಚ್ಛಗೊಳಿಸುವ ಎಲ್ಲ ಖಾಸಗಿ ಏಜೆನ್ಸಿಗಳು ಮತ್ತು ವಾಹನಗಳ ನೋಂದಣಿಯನ್ನು ಬೆಂಗಳೂರು ಜಲಮಂಡಳಿ (BWSSB) ಕಡ್ಡಾಯಗೊಳಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ 1964ರ ಸೆಕ್ಷನ್ 84 ಮತ್ತು 88ರ ಅಡಿಯಲ್ಲಿ ಈ ಹಿಂದೆ ನೀಡಲಾಗಿದ್ದ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಲಮಂಡಳಿ ಅಧ್ಯಕ್ಷರು ಎಲ್ಲಾ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರಮುಖ ಸೂಚನೆಗಳು:
ಮಾರ್ಚ್ 7 ರ ಒಳಗೆ ಕಡ್ಡಾಯ ನೋಂದಣಿ: ಖಾಸಗಿ ಒಳಚರಂಡಿ ವ್ಯವಸ್ಥೆಯ ಮ್ಯಾನ್‌ಹೋಲ್ ಮತ್ತು ಎಸ್‌ಟಿಪಿ ಘಟಕಗಳನ್ನು ಸ್ವಚ್ಛಗೊಳಿಸುವ ವಾಹನಗಳ ಮಾಲೀಕರು ಮತ್ತು ಏಜೆನ್ಸಿಗಳನ್ನು ಗುರುತಿಸಿ, 07.03.2026 ರೊಳಗೆ ಕಡ್ಡಾಯವಾಗಿ ವಿಭಾಗ ಮಟ್ಟದಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ.
ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ: ವಾಣಿಜ್ಯ ಕಟ್ಟಡಗಳು, ವಸತಿ ಸಮುಚ್ಚಯಗಳು, ಗ್ರೂಪ್ ಹೌಸ್ ಮತ್ತು ಖಾಸಗಿ ಬಡಾವಣೆಗಳಲ್ಲಿರುವ ಎಸ್‌ಟಿಪಿ ಮತ್ತು ಮ್ಯಾನ್‌ಹೋಲ್‌ಗಳ ನಿರ್ವಹಣೆಯನ್ನು ಕಡ್ಡಾಯವಾಗಿ ಜಲಮಂಡಳಿಯಲ್ಲಿ ನೋಂದಾಯಿತವಾಗಿರುವ ಏಜೆನ್ಸಿಗಳ ಮುಖಾಂತರವೇ ಮಾಡಿಸಬೇಕು ಎಂದು ಸೂಚಿಸಲಾಗಿದೆ.
ಅನಾಹುತಗಳಿಗೆ ಮಾಲೀಕರೇ ಹೊಣೆ: ನೋಂದಾಯಿಸಲ್ಪಡದ ಅಥವಾ ಅನಧಿಕೃತ ವ್ಯಕ್ತಿಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡಾಗ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ, ಆಯಾ ವಾಣಿಜ್ಯ ಕಟ್ಟಡ / ವಸತಿ ಸಮುಚ್ಚಯ / ಖಾಸಗಿ ಬಡಾವಣೆಗಳ ಮಾಲೀಕರು ಅಥವಾ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ (RWA) ರವರೇ ನೇರ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಲಾಗಿದೆ.
ಈ ನಿಯಮಾವಳಿಗಳ ಕುರಿತು ಎಲ್ಲ ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಚಯಗಳ ಮಾಲೀಕರು ಹಾಗೂ ಅಸೋಸಿಯೇಷನ್‌ಗಳಿಗೆ ಕೂಡಲೇ ಸೂಚನಾ ಪತ್ರವನ್ನು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.