2026-06-08 05:26:02

by next year bilingual system introduced: madhu bangarappa| ಮುಂದಿನ ವರ್ಷದೊಳಗೆ ದ್ವಿಭಾಷಾ ಮಾಧ್ಯಮ ಜಾರಿ: ಮಧು ಬಂಗಾರಪ್ಪ| Speed News Kannada

by next year bilingual system introduced: madhu bangarappa| ಮುಂದಿನ ವರ್ಷದೊಳಗೆ  ದ್ವಿಭಾಷಾ ಮಾಧ್ಯಮ ಜಾರಿ: ಮಧು ಬಂಗಾರಪ್ಪ| Speed News Kannada

ಬೆಂಗಳೂರು:ಮುಂದಿನ ವರ್ಷದೊಳಗೆ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೆ ತರಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ  ಕಾರ್ಯಕ್ರಮದಲ್ಲಿ ಜಯಲಕ್ಷ್ಮಿ ಬಿ. ಅವರು ಕನ್ನಡಕ್ಕೆ ಅನುವಾದಿಸಿರುವ ಕಂಚ ಐಲಯ್ಯ ಅವರ ‘ಶೂದ್ರ ಬಂಡಾಯ’ ಪುಸ್ತಕವನ್ನು ಬಿಡಿಗಡೆಗೊಳಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಈಗಾಗಲೇ ಹಲವು ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿಗೊಳಿಸಲಾಗಿದೆ. ಸರ್ಕಾರಿ‌ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸುವುದಾಗಿ ಘೋಷಿಸಿದಾಗ ನನ್ನನ್ನು ಕನ್ನಡ ವಿರೋಧಿ ಎಂದು ಟೀಕಿಸಿದರು. ಆದರೆ ಅಂತಹ ಟೀಕೆಗಳಿಗೆ ತಲೆಕೆಡಿಸಿಕೊಳ್ಳಲಿಲ್ಲ. ನಾನು ಕನ್ನಡ ವಿರೋಧಿ ಅಲ್ಲ. ಕನ್ನಡಕ್ಕೆ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಈ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ನಕಲು ಮಾಡಿ ಉತ್ತೀರ್ಣರಾದವರು ಜೀವನದಲ್ಲಿ ಮುಂದೆ ಬರಲು ಆಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸಾಮಾಜಿಕ ನ್ಯಾಯವನ್ನು ಶಿಕ್ಷಣ ಮೂಲಕ ಕಾರ್ಯರೂಪಕ್ಕೆ ತರುತ್ತಿದ್ದೇವೆ ಎಂದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.