2026-05-29 09:48:53

ಯತೀಂದ್ರಗೆ ಸಚಿವ ಸ್ಥಾನ ಫಿಕ್ಸ್: ಫಲಿಸಿದ ಸಿದ್ದರಾಮಯ್ಯ ಪ್ರಯತ್ನ|Speed News Kannada

ಯತೀಂದ್ರಗೆ ಸಚಿವ ಸ್ಥಾನ ಫಿಕ್ಸ್: ಫಲಿಸಿದ ಸಿದ್ದರಾಮಯ್ಯ ಪ್ರಯತ್ನ|Speed News Kannada

ನವದೆಹಲಿ: ತಮ್ಮ ಪುತ್ರ ಯತೀಂದ್ರ ಅವರನ್ನು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪರಿಚಯಿಸಿದ್ದಾರೆ. ಈ ಮೂಲಕ ಅವರು ಯತೀಂದ್ರ ಅವರಿಗೆ ಹೊಸ ಸಂಪುಟದಲಿ ಸಚಿವ ಸ್ಥಾನವನ್ನು ಆಖೈರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿಗೆ ಆಗಮಿಸಿದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಪುತ್ರ  ಯತೀಂದ್ರ ಅವರನ್ನು ಜತೆಯಲ್ಲಿ ಕರೆದುಕೊಂಡು ಹೋಗಿದ್ದ ಅವರು, ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟು ಹೊಸ ಸಂಪುಟದಲ್ಲಿ ಅವಕಾಶ ಕಲ್ಪಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು. ಜತೆಗೆ ತಮ್ಮ ಆಪ್ತರಲ್ಲಿ ಕೆಲವರಿಗೆ ಸಚಿವ ಸ್ಥಾನ ಮೀಡಲು ಲಾಬಿ ನಡೆಸಿದ್ದಾರೆ ಎಂದೂ ಮೂಲಗಳು ಖಚಿತಪಡಿಸಿವೆ,.

ಗೂ ಸಂಪುಟದಲ್ಲಿ ಅವಕಾಶ ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಸಂದರ್ಭದಲ್ಲಿ ಇವರೆಲ್ಲರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಭೇಟಿ ಚರ್ಚೆ ನಡೆಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.