2026-03-07 05:52:45

Car falls into canal four killed | ಮಥುರಾ ಕಾಲುವೆಗೆ ಬಿದ್ದ ಕಾರು ನಾಲ್ವರ ದುರ್ಮರಣ | Speed News Kannada

Car falls into canal four killed | ಮಥುರಾ ಕಾಲುವೆಗೆ ಬಿದ್ದ ಕಾರು ನಾಲ್ವರ ದುರ್ಮರಣ | Speed News Kannada

ಮಥುರಾ:  ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದು, ಮೂವರು ಸಹೋದರರು ಸೇರಿದಂತೆ ನಾಲ್ವರು ಮೃತಪಟ್ಟಿರುವ ದುರಂತ ಘಟನೆ ಉತ್ತರ ಪ್ರದೇಶದ ಮಥುರಾ ನಗರದಲ್ಲಿ ನಡೆದಿದೆ. ಮೃತರನ್ನು ರಾಹುಲ್(23) ಮತ್ತು ಅವರ ಸೋದರಸಂಬಂಧಿಗಳಾದ ಅಮಿತ್ (23) ಮತ್ತು ಮೋಹಿತ್ (21) ಎಂದು ಗುರುತಿಸಲಾಗಿದೆ.  
ಕಳೆದ ರಾತ್ರಿ ಕಾರು ಮಹಮೂದ್‌ಪುರದಿಂದ ದೀಗ್‌ಗೆ ಪ್ರಯಾಣಿಸುತ್ತಿದ್ದಾಗ ನಹ್ಲಾ ದೇವಿ ಸೇತುವೆ ಸಮೀಪ ಈ ಅಪಘಾತ ಸಂಭವಿಸಿದೆ. 
ಈ ರಸ್ತೆಯಲ್ಲಿ ತೀಕ್ಷ್ಣವಾದ ತಿರುವು ಇದ್ದು, ಅತಿ ವೇಗದಲ್ಲಿದ್ದ ಕಾರು ತಿರುವು ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆ ಗೋಡೆಗೆ ಡಿಕ್ಕಿ ಹೊಡೆದು ನಂತರ ಕಾಲುವೆಗೆ ಉರುಳಿಬಿದ್ದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಚಂದ್ರ ರಾವತ್ ತಿಳಿಸಿದ್ದಾರೆ.
ಕೂಡಲೇ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಕಾರನ್ನು ಕಾಲುವೆಯಿಂದ ಹೊರತೆಗೆಯುವಲ್ಲಿ ಯಶಸ್ವಿಯಾದರು. ಆದರೆ ಕಾರಿನಲ್ಲಿದ್ದವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.
ಮೃತರೆಲ್ಲರೂ ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಲದೇವ್‌ಗಢ ನಿವಾಸಿಗಳು ಎಂದು ತಿಳಿದು ಬಂದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.