2026-03-07 12:19:53

Car overturns while taking lover to get drunk | ಮದ್ಯೆಯಾಗಲು ಲವ್ವರ್‌ನನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ ಯುವಕನ ಬಿಟ್ಟು ಯುವತಿ ಎಸ್ಕೆಪ್ | Speed News Kannada

Car overturns while taking lover to get drunk | ಮದ್ಯೆಯಾಗಲು ಲವ್ವರ್‌ನನ್ನು ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿ ಯುವಕನ ಬಿಟ್ಟು ಯುವತಿ ಎಸ್ಕೆಪ್ | Speed News Kannada

ಹಾವೇರಿ: ಮದುವೆಯಾಗಲೆಂದು ತಾನು ಪ್ರೀತಿಸಿದ ಹುಡುಗಿಯನ್ನ ಬಾಡಿಗೆ ಕಾರು ಮಾಡಿಕೊಂಡು ಬೆಂಗಳೂರಿನತ್ತ ತೆರಳುತ್ತಿದ್ದ ಯುವಕನ ಕನಸು ರಸ್ತೆ ಮಧ್ಯೆಯೇ ನುಚ್ಚುನೂರಾದ ಘಟನೆ ಹಾವೇರಿಯಲ್ಲಿ ನಡೆದಿದೆ.ಘಟನೆಯಲ್ಲಿ ಪ್ರಿಯಕರ ಸೇರಿ ಮೂವರು ಆಸ್ಪತ್ರೆ ಪಾಲಾಗಿದ್ದರೆ, ಯುವತಿ ಮಾತ್ರ ಅಲ್ಲಿಂದ ಪರಾರಿಯಾಗಿ ಬೆಂಗಳೂರು ಸೇರಿಕೊಂಡ ಘಟನೆ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ತಾಂಡಾ ಬಳಿ ನಡೆದಿದೆ.
ಏನಿದು ಘಟನೆ..?: ಗಾಯಾಳು ಯುವಕ ಇರ್ಫಾನ್ ಮತ್ತು ಹಿರೇಕೆರೂರು ಮೂಲದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರಿಬ್ಬರ ನಡುವೆ ಪರಿಚಯವಾಗಿ, ಪ್ರೀತಿ ಅಂಕುರಿಸಿತ್ತು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.
ಇತ್ತ ಯುವತಿ ಇತ್ತೀಚೆಗೆ ಜಾತ್ರೆಗಾಗಿ ಹಿರೇಕೆರೂರಿನ ತನ್ನೂರಿಗೆ ಬಂದಿದ್ದಳು. ಆಕೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮದುವೆಯಾಗಲು ಇರ್ಫಾನ್ ಪ್ಲಾನ್ ಮಾಡಿದ್ದ. ಇದಕ್ಕಾಗಿ ತನ್ನ ಸ್ನೇಹಿತರಾದ ಚಂದ್ರು ಮತ್ತು ಗುರುರಾಜ್ ಅವರ ಜೊತೆ ಬಾಡಿಗೆ ಕಾರಿನಲ್ಲಿ ಊರಿಗೆ ಬಂದಿದ್ದ ಇರ್ಫಾನ್, ಯುವತಿಯನ್ನು ಕರೆದುಕೊಂಡು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದ
ಯುವತಿಯ ಪೋಷಕರು ಬೆನ್ನಟ್ಟಬಹುದು ಎಂಬ ಭಯದಲ್ಲಿ ಯುವಕರು ವೇಗವಾಗಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಆದರೆ ಚನ್ನಹಳ್ಳಿ ತಾಂಡಾ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ಭೀಕರತೆಗೆ ಕಾರು ಸಂಪೂರ್ಣ ನುಜ್ಜುನುಜ್ಜಾಗಿದ್ದು, ಇರ್ಫಾನ್ ಹಾಗೂ ಆತನ ಇಬ್ಬರು ಸ್ನೇಹಿತರಿಗೆ ಗಂಭೀರ ಗಾಯಗಳಾಗಿವೆ. ಕಾರಿನ ಹಿಂಬದಿಯ ಸೀಟಿನಲ್ಲಿದ್ದ ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಇನ್ನು ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಜನರ ಗುಂಪು ಸೇರುವುದನ್ನು ಕಂಡು ಮರ್ಯಾದೆಗೆ ಅಂಜಿ, ಯುವತಿ ತನ್ನ ಪ್ರಿಯಕರನನ್ನು ಅಲ್ಲಿಯೇ ಬಿಟ್ಟು ಅವರಿವರ ಬಳಿ ಲಿಫ್ಟ್ ಕೇಳಿ ಬೆಂಗಳೂರು ಬಸ್ ಹತ್ತಿ ಮನೆ ಸೇರಿದ್ದಾಳೆ. ಸದ್ಯ ಗಾಯಾಳು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.