2026-03-10 04:27:26

cbi questions acquittence of kejriwal sisodia Speed News Kannada

cbi questions acquittence of kejriwal sisodia  Speed News Kannada

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್‌ ಆದ್ಮಿ ಪಾರ್ಟಿ (ಎಎಪಿ)ಮುಖಂಡ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯದ ಆದೇಶವನ್ನು ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ.

ದೆಹಲಿಯಲ್ಲಿ ಹಿಂದಿನ ಎಎಪಿ ಸರ್ಕಾರವು ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ನಡೆಸಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ.

ಕೇಜ್ರವಾಲ್, ಸಿಸೋಡಿಯಾ ಮತ್ತು ಇತರರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ರಾ ಸೋಮವಾರ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ವಿಚಾರಣೆ ನಡೆಸದೆಯೇ ಕೇಜ್ರವಾಲ್, ಸಿಸೋಡಿಯಾ ಮತ್ತು ಇತರ 21 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರವಾಲ್, ಸಿಸೋಡಿಯಾ ಮತ್ತು ಇತರರು ಭಾಗಿಯಾಗಿರುವ ಸಂಬಂಧ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಲಾಗಿದೆ ಎಂದು ಸಿಬಿಐ ಪ್ರತಿಪಾದಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.