2026-03-07 05:29:16

CBSE exams postponed in Iran Israel West Asia | ಇರಾನ್ ಇಸ್ರೇಲ್ ಪಶ್ಚಿಮ ಏಷ್ಯಾದಲ್ಲಿ ಸಿಬಿಎಸ್‌ಇ ಪರೀಕ್ಷೆಗಳು ಮುಂದೂಡಿಕೆ | Speed News Kannada

CBSE exams postponed in Iran Israel West Asia | ಇರಾನ್ ಇಸ್ರೇಲ್ ಪಶ್ಚಿಮ ಏಷ್ಯಾದಲ್ಲಿ ಸಿಬಿಎಸ್‌ಇ ಪರೀಕ್ಷೆಗಳು ಮುಂದೂಡಿಕೆ | Speed News Kannada

ನವದೆಹಲಿ: ಇರಾನ್ ಮೇಲಿನ ಇಸ್ರೇಲ್ ಹಾಗೂ ಅಮೆರಿಕದ ದಾಳಿಯು ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮಾ.5ರಿಂದ ಆ ದೇಶಗಳಲ್ಲಿ ನಡೆಯಬೇಕಿದ್ದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದ ಬಹರೇನ್, ಇರಾನ್, ಕುವೈತ್, ಒಮಾನ್, ಕತಾರ್, ಸೌದಿ ಅರೇಬಿಯಾ ಹಾಗೂ ಯುಎಇ ದೇಶಗಳಲ್ಲಿ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಿಬಿಎಸ್‌ಸಿ ಪರೀಕ್ಷಾ ಮೇಲ್ವಿಚಾರಕ ಸಂಯಮ್ ಭಾರದ್ವಾಜ್ ಹೇಳಿದ್ದಾರೆ.
ಮಾರ್ಚ್ 5ರವರೆಗೆ ಪರಿಸ್ಥಿತಿಯನ್ನು ಅವಲೋಕಿಸಲಿದ್ದೇವೆ. ನಂತರ ಪರೀಕ್ಷೆಗಳು ನಡೆಯುವ ಮುಂದಿನ ದಿನಾಂಕವನ್ನು ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.
ಇರಾನ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಮಾ.2ರಿಂದ ಆರಂಭವಾಗಬೇಕಾಗಿದ್ದ ಸಿಬಿಎಸ್‌ಇ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವು ಮುಂದುವರಿದಿರುವ ಕಾರಣ, ಅನಿಶ್ಚಿತ ಅವಧಿಯವರೆಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷವು ತೀವುಗೊಂಡಿದೆ. ಇದೀಗ ಹಲವು ದೇಶಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ಇರಾನ್ ಮೇಲಿನ ದಾಳಿಯು ಹಲವು ದಿನ ಅಥವಾ ವಾರಗಳ ಕಾಲ ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.