ಬೆಂಗಳೂರು: ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ.
ಏಪ್ರಿಲ್ 22, 23, 24ರಂದು ರಾಜ್ಯಾದ್ಯಂತ ಒಟ್ಟು 745 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ ಒಟ್ಟು 1,86,099 ವಿದ್ಯಾರ್ಥಿನಿಯರು ಹಾಗೂ 1,44,380 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು. 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಇಂದು ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಈ ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ಕಿಸಿ ಫಲಿತಾಂಶ ವೀಕ್ಷಿಸಬಹುದು.
https://keaonline.karnataka.gov.in/ugcet_2026_results, https://keaonline.karnataka.gov.in/ugcet_2026_result ಹಾಗೂ https://cetonline.karnataka.gov.in/kea ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.