2026-03-07 12:10:03

Chairman Dr Ram Prasat Manohar | ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್ ಸಲಹಾ ಸಮಿತಿಗೆ ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಆಯ್ಕೆ | Speed News Kannada

Chairman Dr Ram Prasat Manohar | ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್ ಸಲಹಾ ಸಮಿತಿಗೆ ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ಆಯ್ಕೆ | Speed News Kannada

ಬೆಂಗಳೂರು: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ 'ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್' (SWAN), ತನ್ನ 5ನೇ 'ಹಿರಿಯ ಯುಟಿಲಿಟಿ ಸಲಹಾ ಸಮಿತಿ'ಯನ್ನು ಪ್ರಕಟಿಸಿದೆ. ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಈ ಜಾಗತಿಕ ಗಣ್ಯರ ಸಮಿತಿಗೆ ಆಯ್ಕೆಯಾಗಿದ್ದಾರೆ.
ಈ ಪ್ರತಿಷ್ಠಿತ ಸಮಿತಿಗೆ ಆಯ್ಕೆಯಾದ ಭಾರತದ ಏಕೈಕ ಜಲಮಂಡಳಿ ಮುಖ್ಯಸ್ಥರು ಡಾ. ಮನೋಹರ್ ಆಗಿರುವುದು ವಿಶೇಷವಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ, ಕೆನಡಾ, ಪೋರ್ಚುಗಲ್, ಬ್ರೆಜಿಲ್ ಮತ್ತು ಅಮೆರಿಕದ ತಜ್ಞರು ಈ ಸಮಿತಿಯಲ್ಲಿದ್ದಾರೆ.
ಆಯ್ಕೆಯಾದ ಸಮಿತಿ ಸದಸ್ಯರು ಜಾಗತಿಕ ಮಟ್ಟದಲ್ಲಿ ನೀರಿನ ಸವಾಲುಗಳು, ಪ್ರಾದೇಶಿಕ ಟ್ರೆಂಡ್‌ಗಳು ಮತ್ತು ಕಾರ್ಯತಂತ್ರದ ಸಂಶೋಧನಾ ಆದ್ಯತೆಗಳನ್ನು ಗುರುತಿಸಲು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಉದ್ಯಮಕ್ಕೆ ನೀಡಿದ ವ್ಯಾಪಕ ಕೊಡುಗೆಯ ಆಧಾರದ ಮೇಲೆ ಆಯ್ಕೆಯಾಗಿರುವ ಈ ತಂಡ, 'ಸ್ವಾನ್'ನ ಭವಿಷ್ಯದ ಯೋಜನೆಗಳು ಮತ್ತು ಜಾಗತಿಕ ಉಪಕ್ರಮಗಳನ್ನು ಪರಿಶೀಲಿಸಲಿದೆ.
ಇತ್ತೀಚೆಗೆ ಜಲಮಂಡಳಿಯಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ದತ್ತಾಂಶ-ಆಧಾರಿತ (data-driven) ಉಪಕ್ರಮಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಕ್ಕಾಗಿ ಡಾ. ಮನೋಹರ್ ಅವರಿಗೆ ಜಾಗತಿಕ ಮಟ್ಟದಲ್ಲಿ ಈ ನೇರ ಮನ್ನಣೆ ದೊರೆತಿದೆ. ಅವರ ಪ್ರಯತ್ನಗಳಿಂದಾಗಿ ಬೆಂಗಳೂರು ಸ್ಮಾರ್ಟ್ ನೀರು ನಿರ್ವಹಣೆಯ ಪ್ರಮುಖ ಸರ್ಕಾರಿ ಜಲ ನಿರ್ವಹಣಾ ಸಂಸ್ಥೆಯಾಗಿ ಹೊರಹೊಮ್ಮಿದ್ದು, ಭಾರತ ದೇಶದ ನೀರಿನ ಸವಾಲುಗಳು ಮತ್ತು ತಾಂತ್ರಿಕ ಪರಿಹಾರಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿನಿಧಿಸಲು ಇದು ಸಹಕಾರಿಯಾಗಿದೆ.
ತಮ್ಮ ಆಯ್ಕೆಯ ಡಾ. ರಾಮ್ ಪ್ರಸಾತ್ ಮನೋಹರ್ ಪ್ರತಿಕ್ರಿಯಿಸಿ ಜಲಮಂಡಳಿಯು ನಗರದ ಮೂಲಸೌಕರ್ಯವನ್ನು ಉನ್ನತೀಕರಿಸಲು ವಿಶ್ವದರ್ಜೆಯ, ಎಐ-ಚಾಲಿತ ತಂತ್ರಜ್ಞಾನಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದೆ. ಬೆಂಗಳೂರಿನ ನಾಗರಿಕರಿಗೆ ಸೇವೆ ಸಲ್ಲಿಸಲು ಪ್ರತಿದಿನ ಈ ತಾಂತ್ರಿಕ ಯೋಜನೆಗಳನ್ನು ಕಾರ್ಯಗತಗೊಳಿಸುವ ಜಲಮಂಡಳಿಯ ತಾಂತ್ರಿಕ ತಂಡ ಮತ್ತು ಸಿಬ್ಬಂದಿಯ ಅವಿರತ ಶ್ರಮಕ್ಕೆ ನಾನು ಈ ಮೈಲಿಗಲ್ಲನ್ನು ಅರ್ಪಿಸುತ್ತೇನೆ  ಎಂದಿದ್ದಾರೆ. ಜಾಗತಿಕವಾಗಿ ಸ್ಮಾರ್ಟ್ ವಾಟರ್ ವ್ಯವಸ್ಥೆಯನ್ನು ರೂಪಿಸುವಲ್ಲಿ 'ಸ್ವಾನ್' ಸಂಸ್ಥೆಯ ದೂರದೃಷ್ಟಿ ನನಗೆ ಅತ್ಯಂತ ಇಷ್ಟವಾಗಿದೆ. ನಾವು ಇಂದು ಎದುರಿಸುತ್ತಿರುವ ಸಂಕೀರ್ಣ ನೀರಿನ ಸವಾಲುಗಳಿಗೆ ಪ್ರಾಯೋಗಿಕ ಪರಿಹಾರಗಳನ್ನು ಕಂಡುಕೊಳ್ಳಲು ಜಾಗತಿಕ ತಜ್ಞರೊಂದಿಗೆ (UAG) ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.