2026-04-24 01:41:22

Cheating in the name of love | Young man commits suicide over video call |ಪ್ರೀತಿಯ ಹೆಸರಲ್ಲಿ ವಂಚನೆ| ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ|Speed News Kannada

Cheating in the name of love | Young man commits suicide over video call |ಪ್ರೀತಿಯ ಹೆಸರಲ್ಲಿ ವಂಚನೆ| ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ|Speed News Kannada

ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 23 ವರ್ಷದ ಅಭಿಷೇಕ್ ಎಂಬ ಯುವಕ ಪ್ರೀತಿಸಿದ ಯುವತಿಯಿಂದ ವಂಚನೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆ ಯುವತಿಯ ಪೋಷಕರು ಅಭಿಷೇಕ್ ವಿರುದ್ಧ ದೂರು ನೀಡಿದ್ದಾಗ, ಪೊಲೀಸ್ ಠಾಣೆಯಲ್ಲಿ ರಾಜಿ ಸಂಧಾನ ಮಾಡಿಸಲಾಗಿತ್ತು. ಆದರೆ, ಆ ಬಳಿಕ ಇಬ್ಬರೂ ಮನೆಯವರಿಗೆ ತಿಳಿಯದಂತೆ ರಹಸ್ಯವಾಗಿ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಯುವತಿಯು ತನ್ನನ್ನು ಕಡೆಗಣಿಸುತ್ತಿದ್ದಾಳೆಂಬ ಕಾರಣಕ್ಕೆ ಮನನೊಂದ ಅಭಿಷೇಕ್, ಆಕೆಗೆ ವಿಡಿಯೋ ಕಾಲ್ ಮಾಡಿ ತಾನು ಸಾಯುತ್ತಿರುವುದಾಗಿ ತಿಳಿಸಿ ಪ್ರಾಣ ಕಳೆದುಕೊಂಡಿದ್ದಾನೆ.

ಸಾಯುವ ಮುನ್ನ ಅಭಿಷೇಕ್ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಮದುವೆಯ ವಿಚಾರ ಹಾಗೂ ಯುವತಿಯಿಂದಾದ ನೋವಿನ ಬಗ್ಗೆ ಉಲ್ಲೇಖಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಕಾಲ್ ಸಂಭಾಷಣೆ ಮತ್ತು ಮೆಸೇಜ್‌ಗಳ ಸ್ಕ್ರೀನ್‌ಶಾಟ್‌ಗಳು ಲಭ್ಯವಾಗಿದ್ದು, ಇವುಗಳನ್ನು ಪೊಲೀಸರು ಸಾಕ್ಷ್ಯವಾಗಿ ಪರಿಗಣಿಸಿದ್ದಾರೆ. ಸದ್ಯ ಪೊಲೀಸರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮೃತನ ಡೆತ್‌ನೋಟ್ ಆಧಾರದ ಮೇಲೆ ಯುವತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಒಟ್ಟಿನಲ್ಲಿ ಪ್ರೀತಿ ಹಾಗೂ ದಾಂಪತ್ಯದ ಕಲಹವೊಂದು ಯುವಕನ ಬಲಿ ಪಡೆದಂತಾಗಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.