2026-07-23 12:38:56

Chief Minister inaugurates Siddaramaiah Bridge in NRpura|ಎನ್‌ಆರ್‌ಪುರದ ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ|Speed News Kannada

Chief Minister inaugurates Siddaramaiah Bridge in NRpura|ಎನ್‌ಆರ್‌ಪುರದ ಸಿದ್ದರಾಮಯ್ಯ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ|Speed News Kannada

ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ  ಪಟ್ಟಣದ ಹೊರಹೊಲಯದಲ್ಲಿ ನಿರ್ಮಾಣಗೊಂಡಿರುವ ತಮ್ಮದೇ ಹೆಸರಿನ ಸೇತುವೆಯನ್ನು  ಸಿಎಂ ಸಿದ್ದರಾಮಯ್ಯ  ಉದ್ಘಾಟಿಸಿದ್ದಾರೆ.ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 58 ಮೀಟರ್ ಉದ್ದದ ಸೇತುವೆ ಇದಾಗಿದೆ. ಹತ್ತಾರು ಹಳ್ಳಿ ಗ್ರಾಮಸ್ಥರು 6 ದಶಕಗಳಿಂದ ಸೇತುವೆಗೆ ಬೇಡಿಕೆ ಇಟ್ಟಿದ್ದರು. ಸೇತುವೆ ನಿರ್ಮಾಣದಿಂದ 10ಕ್ಕೂ ಹೆಚ್ಚು ಹಳ್ಳಿಗಳಿಗೆ ವರದಾನವಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರಲು ಮೊದಲು 30 ಕಿಮೀ ಸುತ್ತಿ ಬರಬೇಕಿತ್ತು. ಈ ದೂರವನ್ನು ಸೇತುವೆ ಕೇವಲ 3 ಕಿಮೀಗೆ ಇಳಿಸಿದೆ. ಇದೇ ವೇಳೆ ಅವರ ಪುತ್ಥಳಿಯನ್ನು ಸಹ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅಧಿಕಾರಾವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.