2026-03-07 04:58:52

Chief Secretary denies Snehamayi Krishnas allegations | ಲಂಚ ಸ್ನೇಹಮಯಿ ಕೃಷ್ಣ ಆರೋಪ ನಿರಾಕರಿಸಿದ ಮುಖ್ಯ ಕಾರ್ಯದರ್ಶಿ | Speed News Kannada

Chief Secretary denies Snehamayi Krishnas allegations | ಲಂಚ ಸ್ನೇಹಮಯಿ ಕೃಷ್ಣ ಆರೋಪ ನಿರಾಕರಿಸಿದ ಮುಖ್ಯ ಕಾರ್ಯದರ್ಶಿ | Speed News Kannada

ಬೆಂಗಳೂರು: ಮೈಸೂರು ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ನಿಯಾಮನುಸಾರವಾಗಿಯೇ ಮುಂಬಡ್ತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರದ  ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಕಾರ್ಯದರ್ಶಿಗಳು ಲಂಚ ತೆಗೆದುಕೊಂಡು ನಟೇಶ್‌ ಅವರಿಗೆ ಮುಂಬಡ್ತಿ ನೀಡಿದ್ದಾರೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು.
ಈ ಆರೋಪಕ್ಕೆ ಯಾವುದೇ ಆಧಾರ ಇಲ್ಲ. ಸುಳ್ಳು ಮತ್ತು ಕ್ಷುಲ್ಲಕ ಆರೋಪಗಳಾಗಿವೆ. ಆಧಾರರಹಿತ ಆರೋಪ ಮಡಿರುವುದಕ್ಕೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ದೂರುದಾರರು ತಮ್ಮ ಆರೋಪಕ್ಕೆ ಯಾವುದೇ ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ. ಒಂದು ವೇಳೆ ಸೂಕ್ತ ದಾಖಲೆ ಒದಗಿಸಿದರೆ ನಿಯಮಾನುಸಾರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುತ್ತದೆ ಎಂದೂ ಶಾಲಿನಿ ರಜನೀಶ್‌ ತಿಳಿಸಿದ್ದಾರೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.