2026-07-23 09:08:59

Chinas air defense system failure | ಚೀನಾ ಏರ್ ಡಿಫೆನ್ಸ್ ವ್ಯವಸ್ಥೆ ವಿಫಲ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾದ ಚೈನಾ | Speed News Kannada

Chinas air defense system failure | ಚೀನಾ ಏರ್ ಡಿಫೆನ್ಸ್ ವ್ಯವಸ್ಥೆ ವಿಫಲ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾದ ಚೈನಾ | Speed News Kannada

ವಾಷಿಂಗ್ಟನ್: ಚೀನಾ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಏರ್ ಡಿಫೆನ್ಸ್‌ ವ್ಯವಸ್ಥೆ HQ-9B ಇತ್ತೀಚಿನ ಯುದ್ಧ ಪರಿಸ್ಥಿತಿಗಳಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ ಎನ್ನಲಾಗಿದ್ದು, ಇದರಿಂದ ಚೀನಾದ ಸೇನಾ ತಂತ್ರಜ್ಞಾನ ಬಗ್ಗೆ ಜಾಗತಿಕ ಮಟ್ಟದಲ್ಲಿ ಪ್ರಶ್ನೆಗಳು ಉದ್ಭವಿಸಿದ್ದಿವೆ. ವರದಿಗಳ ಪ್ರಕಾರ, ಚೀನಾದ ಈ ವ್ಯವಸ್ಥೆ ಪಾಕಿಸ್ತಾನ, ವೆನೆಜುವೆಲಾ ಮತ್ತು ಇತ್ತೀಚೆಗೆ ಇರಾನ್ನಲ್ಲಿ ನಡೆದ ದಾಳಿಗಳನ್ನು ತಡೆಯಲು ವಿಫಲವಾಗಿದೆ. ಇದರಿಂದ ಚೀನಾದ ಏರ್ ಡಿಫೆನ್ಸ್‌ ಸಾಮರ್ಥ್ಯದ ಮೇಲೆ ಹಲವಾರು ರಕ್ಷಣಾ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ. HQ-9B ವ್ಯವಸ್ಥೆಯನ್ನು ಚೀನಾ ತನ್ನ ಅತ್ಯಾಧುನಿಕ ದೀರ್ಘ ದೂರದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯಾಗಿ ಪ್ರಚಾರ ಮಾಡಿತ್ತು. ಇದು ಒಂದೇ ವೇಳೆ ಅನೇಕ ಗುರಿಗಳನ್ನು ಪತ್ತೆಹಚ್ಚಿ ಅವುಗಳನ್ನು ನಾಶಪಡಿಸುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿತ್ತು. ಆದರೆ ನೈಜ ಯುದ್ಧ ಪರಿಸ್ಥಿತಿಯಲ್ಲಿ ಈ ವ್ಯವಸ್ಥೆ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ವರದಿ ಹೇಳುತ್ತದೆ.
ಇದೇ ಸಂದರ್ಭದಲ್ಲಿ JY-27A ರಾಡಾರ್ ವ್ಯವಸ್ಥೆಯೂ ದಾಳಿಗಳನ್ನು ಸರಿಯಾಗಿ ಪತ್ತೆಹಚ್ಚಲು ವಿಫಲವಾಗಿದೆ ಎಂದು ಹೇಳಲಾಗಿದೆ. ಇದರಿಂದ ಕೆಲವು ವಿಶ್ಲೇಷಕರು ಈ ವ್ಯವಸ್ಥೆ "ಕಣ್ಣು, ಕಿವಿ ಇಲ್ಲದಂತಾಗಿದೆ" ಎಂದು ವ್ಯಂಗ್ಯ ಮಾಡಿದ್ದಾರೆ.
ಕಳೆದ ವರ್ಷ ನಡೆದ ಭಾರತದ 'ಆಪರೇಶನ್ ಸಿಂಧೂರ್' ವೇಳೆ ಪಾಕಿಸ್ತಾನ ಬಳಕೆ ಮಾಡಿದ ಚೀನಾದ ಏರ್ ಡಿಫೆನ್ಸ್ ವ್ಯವಸ್ಥೆಗಳು ಭಾರತೀಯ ದಾಳಿಗಳನ್ನು ತಡೆಯಲು ಸಾಧ್ಯವಾಗಲಿಲ್ಲ ಎಂಬ ಆರೋಪವೂ ಕೇಳಿಬಂದಿತ್ತು. ಇದರ ಹಿನ್ನೆಲೆ ಚೀನಾದಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಹಲವು ದೇಶಗಳು ಇದೀಗ ಆ ವ್ಯವಸ್ಥೆಗಳ ವಿಶ್ವಾಸಾರ್ಹತೆ ಬಗ್ಗೆ ಮರುಪರಿಶೀಲನೆ ಮಾಡಬೇಕಾದ ಪರಿಸ್ಥಿತಿ ಎದುರಿಸುತ್ತಿವೆ ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.