ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ನಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗು ಮುನ್ನ ನಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ, ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.