2026-04-24 01:38:43

Chitradurga student commits suicide | ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ, ನೇಣಿಗೆ ಶರಣಾದ ಚಿತ್ರದುರ್ಗ ವಿದ್ಯಾರ್ಥಿನಿ | Speed news kannada

Chitradurga student commits suicide | ಅಧ್ಯಾಪಕನೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ, ನೇಣಿಗೆ ಶರಣಾದ ಚಿತ್ರದುರ್ಗ ವಿದ್ಯಾರ್ಥಿನಿ  | Speed news kannada

ಅಧ್ಯಾಪಕನ ಜೊತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಹಿನ್ನೆಲೆಯಲ್ಲಿ ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ನಡೆದಿದೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ನಿಖಿತಾ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗು ಮುನ್ನ ನಿಖಿತಾ ಬರೆದಿಟ್ಟಿರುವ ಡೆತ್ ನೋಟ್‌ನಲ್ಲಿ ಪ್ರಾಧ್ಯಾಪಕ ಡಾ. ರಾಜು, ಅವರ ಪತ್ನಿ ನಿಶಾ ಹಾಗೂ ಕೆಲವು ವಿದ್ಯಾರ್ಥಿನಿಯರ ಹೆಸರುಗಳನ್ನು ಉಲ್ಲೇಖಿಸಿ ಆತ್ಮಹತ್ಯೆಮಾಡಿಕೊಂಡಿದ್ದಾಳೆ, ಇವರ ಕಿರುಕುಳ ಮತ್ತು ಅಪಪ್ರಚಾರವೇ ನನ್ನ ಸಾವಿಗೆ ಕಾರಣ ಎಂದು ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.