2026-03-07 07:11:29

CM Basavaraj Bommai PAs son commits suicide | ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮ ಹತ್ಯೆ | Speed News Kannada

CM Basavaraj Bommai PAs son commits suicide | ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮ ಹತ್ಯೆ | Speed News Kannada

ಬೆಂಗಳೂರು : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಎಂಬುವವರ ಮಗ ಹೇಮಂತ್ ಆರ್ ಎಂವಿ ಎರಡನೇ ಹಂತದ ಮನೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ವರದಿ ಆಗಿದೆ.ಸಂಜಯನಗರದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿಯೇ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
CRIME : ಕಾರ್ಮಿಕರ ಟ್ರಾಕ್ಟರ್ ಪಲ್ಟಿ- ನಾಲ್ವರು ಸ್ಥಳದಲ್ಲೇ ಸಾ*ವು!
ಬಾಗಲಕೋಟೆ : ರಾಜ್ಯದಲ್ಲಿ ಶನಿವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.ಬಾಗಲಕೋಟೆಯ ಜಮಖಂಡಿ ಕಟ್ಟೆ ಕೆರೆ ಬಳಿ ನಡೆದಿದೆ. 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೃತ ದುರ್ದೈವಿಗಳ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು ಮೃತದೇಹಗಳನ್ನು ಶವಪರೀಕ್ಷೆಗೆ ರವಾನೆ ಮಾಡ್ಲಾಗಿದೆ. ಶೀಘ್ರವೇ ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡೋಕೆ ಕ್ರಮಕೈಗೊಳ್ಳಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.