ಬೀದರ್: ಮುಖ್ಯಮಂತ್ರಿ ಹುದ್ದೆ ಕುರಿತು ಹೈಕಮಾಂಡ್ ಯಾವುದೇ ಪ್ರಸ್ತಾಪ ಮಾಡಿಲ್ಲವಾದ್ದರಿಂದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಬೀದರ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೈಕಮಾಂಡೇ, ಅದರಲ್ಲಿ ಎರಡನೇ ಮಾತಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾನು ಮೊನ್ನೆಯೂ ಇದನ್ನೇ ಹೇಳೀರುವೆ. ಈಗಲೂ ಅದನ್ನೇ ಪ್ರತಿಪಾದಿಸುವೆ ಎಂದರು.
ಎಲ್ಲ ಪಕ್ಷಗಳಲ್ಲೂ ಸಿಎಂ ಹುದ್ದೆಗೆ ಅನೇಕ ಆಕಾಂಕ್ಷಿಗಳು ಇರುತ್ತಾರೆ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದು ಯತೀಂದ್ರ ತಿಳಿಸಿದರು.