2026-03-07 06:10:39

CM Change | Dr Yathindra Siddaramaiah | ಸಿಎಂ ಬದಲಾವಣೆ: ಹೈಕಮಾಂಡ್‌ ಇದುವರೆಗೂ ಏನನ್ನೂ ಹೇಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ| SNK

CM Change | Dr Yathindra Siddaramaiah | ಸಿಎಂ ಬದಲಾವಣೆ: ಹೈಕಮಾಂಡ್‌ ಇದುವರೆಗೂ ಏನನ್ನೂ ಹೇಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ| SNK

ಬೀದರ್:‌ ಮುಖ್ಯಮಂತ್ರಿ ಹುದ್ದೆ ಕುರಿತು ಹೈಕಮಾಂಡ್‌ ಯಾವುದೇ ಪ್ರಸ್ತಾಪ ಮಾಡಿಲ್ಲವಾದ್ದರಿಂದ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. 
ಬೀದರ್‌ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಹೈಕಮಾಂಡೇ, ಅದರಲ್ಲಿ ಎರಡನೇ ಮಾತಿಲ್ಲ. ಹೈಕಮಾಂಡ್‌ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾನು ಮೊನ್ನೆಯೂ ಇದನ್ನೇ ಹೇಳೀರುವೆ. ಈಗಲೂ ಅದನ್ನೇ ಪ್ರತಿಪಾದಿಸುವೆ ಎಂದರು.
ಎಲ್ಲ ಪಕ್ಷಗಳಲ್ಲೂ ಸಿಎಂ ಹುದ್ದೆಗೆ ಅನೇಕ ಆಕಾಂಕ್ಷಿಗಳು ಇರುತ್ತಾರೆ. ಆದರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎಂದು ಯತೀಂದ್ರ ತಿಳಿಸಿದರು.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.