2026-06-08 01:19:57

ಸಮಾನತೆಯ “ಅರಸ”ನಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್‌ |Speed News Kannada

ಸಮಾನತೆಯ “ಅರಸ”ನಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್‌ |Speed News Kannada

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರರಾದ ಡಿ. ದೇವರಾಜು ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ, ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪುಷ್ಪ ನಮನ ಸಲ್ಲಿಸಿದರು.

ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ಟ್ವೀಟ್‌ ನಲ್ಲಿ  ದೇವರಾಜ ಅರಸು ಅವರ ಸಮಾನತೆಯ ದಾರಿ ಹಾಗೂ ಸಾಮಾಜಿಕ ನ್ಯಾಯದ ತತ್ವಗಳು ನಮಗೆ ದಾರಿದೀಪವಾಗಿದೆ ಎಂದು ಸ್ಮರಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್‌ ಅವರು, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್‌, ಸಚಿವರಾದ ಕೆ.ಹೆಚ್‌ ಮುನಿಯಪ್ಪ, ಯು.ಟಿ ಖಾದರ್‌ ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಅವರು, ಕಾಲೇಜು ದಿನಗಳಲ್ಲಿ ಅರಸು ಭಾಷಣ ಕೇಳಿದ್ದೇನೆ. 100 ವರ್ಷವಾದ್ರೂ ಅರಸು ಸಾಧನೆ ಬದುಕಿರುತ್ತವೆ. ಅರಸು ಅವರಿಗೆ ಹಿಂದುಳಿದ ವರ್ಗದವರ ಮೇಲೆ ವಿಶೇಷ ಕಾಳಜಿಯಿತ್ತು.  ಭೂ ಸುಧಾರಣೆ ಕಾಯ್ದೆಗೆ ಅಡಿಪಾಯ ಹಾಕಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಗೆ ಮೂಲ ಅಡಿಪಾಯ ಹಾಕಿದವರು ಅವರು. ಅರಸು ಮಾರ್ಗದರ್ಶನದಲ್ಲಿ ಎಲ್ಲರೂ ಹೆಜ್ಜೆ ಹಾಕೋಣ ಎಂದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.