2026-03-07 08:08:01

CM Panneerselvam joins DMK | ಗರಿಗೆದರಿದ ತಮಿಳುನಾಡು ಚುನಾವಣೆ ಡಿಎಂಕೆ ಸೇರಿದ ಮಾಜಿ ಸಿಎಂ ಪನ್ನೀರ್‌ಸೆಲ್ವಂ | Speed News Kannada

CM Panneerselvam joins DMK | ಗರಿಗೆದರಿದ ತಮಿಳುನಾಡು ಚುನಾವಣೆ ಡಿಎಂಕೆ ಸೇರಿದ ಮಾಜಿ ಸಿಎಂ ಪನ್ನೀರ್‌ಸೆಲ್ವಂ | Speed News Kannada

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಎಐಎಡಿಎಂಕೆ ಮುಖಂಡ ಮಾಜಿ ಮುಖ್ಯಮಂತ್ರಿ,  ಒ. ಪನ್ನೀರ್‌ಸೆಲ್ವಂ ಅವರು ಇಂದು ಡಿಎಂಕೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಡಿಎಂಕೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್, ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ಅವರ ಸಮ್ಮುಖದಲ್ಲಿ ಪನ್ನೀರ್‌ಸೆಲ್ವಂ ಅವರು ಡಿಎಂಕೆ ಪಕ್ಷದ ಸದಸ್ಯತ್ವವನ್ನು ಸ್ವೀಕರಿಸಿದರು.
ಪನ್ನೀರ್‌ಸೆಲ್ವಂ ಅವರ ಜತೆ ಎಐಎಡಿಎಂಕೆ ಪಕ್ಷದ ಹಲವು ನಾಯಕರೂ ಸಹ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.
2022ರ ಜುಲೈ 11ರಂದು ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನೇಮಿಸಲಾಗಿತ್ತು. ಇವರಿಗೆ ಎದುರಾಳಿಯಾಗಿದ್ದ  ಒ.ಪನ್ನೀರಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು.
ಇತ್ತೀಚೆಗಷ್ಟೇ ಸಿಎಂ ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ್ದ ಪನ್ನೀರ್‌ಸೆಲ್ವಂ ಅವರು ಮುಂಬರುವ  ಚುನಾವಣೆಯಲ್ಲಿ ಡಿಎಂಕೆಗೆ ಗೆಲುವಿನ ಸಾಧ್ಯತೆ ಹೆಚ್ಚು ಎಂದು ಹೇಳಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.