2026-06-08 04:46:06

CM Siddaramaiah Announces Tax Exemption For The Movie Landlord | ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ | Speed News Kannada

CM Siddaramaiah Announces Tax Exemption For The Movie Landlord | ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ | Speed News Kannada

ಬೆಂಗಳೂರು: ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಸಾಮಾಜಿಕ ಜಾಲತಾಣಗಳಲ್ಲಿ "ಲ್ಯಾಂಡ್ ಲಾರ್ಡ್" ಸಿನಿಮಾ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ.  ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ ಎಂದಿದ್ದಾರೆ. 
ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದೂ ತಿಳಿಸಿದ್ದಾರೆ. 
ದುನಿವಾ ವಿಜಿ ಮತ್ತು ರಚಿತಾ ರಾಮ್‌ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರ ಸ್ಯಾಂಡಲ್‌ ವುಡ್‌ ನಲ್ಲಿ ಹೊಸ ಮೈಲಿಗಲ್ಲು ರೂಪಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.