2026-06-08 04:01:02

CM Siddaramaiah calls on healthcare workers | ಜಾತಿಧರ್ಮಗಳನ್ನು ಮೀರಿ ಸೇವೆ ಸಲ್ಲಿಸಿ ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕರೆ | Speed News Kannada

CM Siddaramaiah calls on healthcare workers | ಜಾತಿಧರ್ಮಗಳನ್ನು ಮೀರಿ ಸೇವೆ ಸಲ್ಲಿಸಿ ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕರೆ | Speed News Kannada

ಬೆಂಗಳೂರು: ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ,ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು 1000 ಜನರಿಗೆ ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವನ್ನೊಳಗೊಂಡಿದೆ ಎಂದರು.
ಭ್ರಷ್ಠಾಚಾರ ತಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆ:
ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. ವೈದ್ಯರೂ  ಸೇರಿದಂತೆ 5700 ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ.  ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ನೌಕರರು ಇದಕ್ಕೆ ಬಲಿಯಾಗಬಾರದು  ಎಂದರು. 
ರೋಗ ತಡೆಗಟ್ಟುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು:
ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ,ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳಿಗೆ ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದಂತಹ ತಕ್ಷಣ ಪುನಃ ಜಾತಿಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.
ಆರೋಗ್ಯ ಮತ್ತು ಕುಟುಂಬ‌ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.