2026-03-07 02:07:36

CM Siddaramaiah criticizes BJP | ಅಧಿಕಾರ ಇದ್ದಾಗ ಏನೂ ಮಾಡದೆ ಈಗ ಟೀಕಿಸುವ ಕೆಲಸ ಮಾಡುತ್ತಿದೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ | Speed News Kannada

CM Siddaramaiah criticizes BJP | ಅಧಿಕಾರ ಇದ್ದಾಗ ಏನೂ ಮಾಡದೆ ಈಗ ಟೀಕಿಸುವ ಕೆಲಸ ಮಾಡುತ್ತಿದೆ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕೆ | Speed News Kannada

ಮೈಸೂರು : ಬಿಜೆಪಿಯವರು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆರೋಗ್ಯ ಇಲಾಖೆಯ ಆಹ್ವಾನಪತ್ರಿಕೆಯಲ್ಲಿ ಉರ್ದು ಭಾಷೆ ಮುದ್ರಿತವಾಗಿದ್ದು, ಈ ಬಗ್ಗೆ ಚರ್ಚೆಗಳೆದ್ದಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು.
ಬಿಜೆಪಿ ತನ್ನ ಅವಧಿಯಲ್ಲಿ ಉದ್ಯೋಗ ನೀಡಲಿಲ್ಲ:
ಧಾರವಾಡದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ನೀಡಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸಧ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದರು

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.