2026-03-07 09:11:30

CM Siddaramaiah discusses with farmer representatives | ಬಜೆಟ್ ರೈತ ಪ್ರತಿನಿಧಿಗಳ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ಬೇಡಿಕೆ ಈಡೇರಿಸುವ ಭರವಸೆ | Speed News Kannada

CM Siddaramaiah discusses with farmer representatives | ಬಜೆಟ್ ರೈತ ಪ್ರತಿನಿಧಿಗಳ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ಬೇಡಿಕೆ ಈಡೇರಿಸುವ ಭರವಸೆ | Speed News Kannada

ಬೆಂಗಳೂರು: ಬಜೆಟ್‌ ತಯಾರಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ರೈತ ಸಂಘಟನೆಗಳ ಮುಖಂಡೊಂದಿಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ರೈತ ಸಂಘಟನೆಗಳಿಂದ ಮನವಿ ಸ್ವೀಕರಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿಗಳು, ರೈತ ಸಂಘಟನೆಗಳ ಮುಖಂಡರು ಮತ್ತು ಕೃಷಿ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಅಹವಾಲು ಆಲಿಸಿ, ಬಜೆಟ್‌ನಲ್ಲಿ ಸಾಧ್ಯವಾಗುವ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದೇನೆ.
ನಮ್ಮ ಸರ್ಕಾರದ ಆದ್ಯತೆಯ ಕ್ಷೇತ್ರಗಳಲ್ಲಿ ಕೃಷಿ ಕೂಡ ಒಂದಾಗಿದ್ದು, ಕೃಷಿ ಕಾರ್ಯದಲ್ಲಿ ತೊಡಗಿರುವ ನಾಡಿನ ರೈತಾಪಿ ವರ್ಗದ ಹಿತಕಾಯುವ ನಮ್ಮ ಬದ್ಧತೆಯಲ್ಲಿ ಯಾವ ರಾಜಿಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ವೆಂಕಟೇಶ್, ನೀತಿ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.