2026-06-08 01:24:31

CM Siddaramaiah listens to Dalit organizations Request | ಬಜೆಟ್‌ ತಯಾರಿ ದಲಿತ ಸಂಘಟನೆಗಳ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ | Speed News Kannada

CM Siddaramaiah listens to Dalit organizations Request | ಬಜೆಟ್‌ ತಯಾರಿ ದಲಿತ ಸಂಘಟನೆಗಳ ಅಹವಾಲು ಆಲಿಸಿದ ಸಿಎಂ ಸಿದ್ದರಾಮಯ್ಯ | Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಲಿತ ಸಂಘಟನೆಗಳ ಮುಖಂಡರುಗಳ ಜೊತೆ 2026-27ನೇ ಸಾಲಿನ ಬಜೆಟ್ ಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದರು.
ದಲಿತ ಸಮುದಾಯದ ಅಹವಾಲು ಆಲಿಸಿ, ಸಾಧ್ಯವಾಗುವ ಎಲ್ಲ ಬೇಡಿಕೆಗಳಿಗೆ ಬಜೆಟ್‌ನಲ್ಲಿ ಅಗತ್ಯ ಅನುದಾನ  ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಹಲವು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.