ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಲಿತ ಸಂಘಟನೆಗಳ ಮುಖಂಡರುಗಳ ಜೊತೆ 2026-27ನೇ ಸಾಲಿನ ಬಜೆಟ್ ಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದರು.
ದಲಿತ ಸಮುದಾಯದ ಅಹವಾಲು ಆಲಿಸಿ, ಸಾಧ್ಯವಾಗುವ ಎಲ್ಲ ಬೇಡಿಕೆಗಳಿಗೆ ಬಜೆಟ್‌ನಲ್ಲಿ ಅಗತ್ಯ ಅನುದಾನ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಹಲವು ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.