2026-04-23 09:36:11

CM Siddaramaiah presents 18 demands to PM Modi | ಪ್ರಧಾನಿ ಮೋದಿ ಮುಂದೆ 18 ಬೇಡಿಕೆ ಮುಂದಿಟ್ಟ ಸಿಎಂ ಸಿದ್ದರಾಮಯ್ಯ | Speed news kannada

CM Siddaramaiah presents 18 demands to PM Modi | ಪ್ರಧಾನಿ ಮೋದಿ ಮುಂದೆ 18 ಬೇಡಿಕೆ ಮುಂದಿಟ್ಟ ಸಿಎಂ ಸಿದ್ದರಾಮಯ್ಯ | Speed news kannada

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ ಸುಮಾರು 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದಾರೆ. ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ, ಹೈ-ಸ್ಪೀಡ್ ರೈಲು ವಿಸ್ತರಣೆ, ಸಬರ್ಬನ್ ರೈಲು ಮತ್ತು ಮುಂಬೈ ಕಾರಿಡಾರ್, ಜಲ ಜೀವನ್ ಮಿಷನ್, ಬೆಂಗಳೂರಿಗೆ ವಿಶೇಷ ಪ್ಯಾಕೇಜ್  ಸೇರಿದಂತೆ ಸುಮಾರು 18 ಬೇಡಿಕೆಗಳನ್ನು  ಸಿಎಂ ಮುಂದಿಟ್ಟಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.