2026-05-27 11:16:32

ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ| Speed News Kannada

ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ| Speed News Kannada

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ‌ ಆಯೋಗ ಸಿದ್ದಪಡಿಸಿದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ" ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸ್ವೀಕರಿಸಿದರು.

ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಉಪಸ್ಥಿತರಿದ್ದರು.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್ , ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಊರ್ಮಿಳಾ ಬಿ ಆಡಳಿತಾತ್ಮಕ ಕಾರ್ಯದರ್ಶಿ. ಡಿ.ಎನ್.ನಾಯಕ್ ಆಯೋಗದ ವಿಶೇಷ ಸಲಹೆಗಾರರು ಮತ್ತು ಇತರೆ ತಜ್ಞರು ಉಪಸ್ಥಿತರಿದ್ದರು.

ವರದಿ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಅವರು ವಿಧಾನಸೌಧದಿಂದ ನಿರ್ಗಮಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.