2026-04-24 12:18:32

CM Siddaramayya counter on vijeyendra | ಸಿಎಂ ಸಿದ್ದರಾಮಯ್ಯ ವಿರುದ್ದ ವಿಜಯೇಂದ್ರ ವಾಗ್ದಾಳಿ, ಅಂಕಿ ಅಂಶಗಳ ಸಮೇತ ಸಿದ್ದು ತಿರುಗೇಟು | Speed news kannada

CM Siddaramayya counter on vijeyendra | ಸಿಎಂ ಸಿದ್ದರಾಮಯ್ಯ ವಿರುದ್ದ ವಿಜಯೇಂದ್ರ ವಾಗ್ದಾಳಿ, ಅಂಕಿ ಅಂಶಗಳ ಸಮೇತ ಸಿದ್ದು ತಿರುಗೇಟು | Speed news kannada

ಕರ್ನಾಟಕದ ಆರ್ಥಿಕ ಸ್ಥಿತಿಯನ್ನು ಕುರಿತು ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕೆಂದು ಬಿ ವೈ ವೀಜಯೇಂದ್ರ ಆಗ್ರಹಿಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ-ಅಂಶಗಳ ಸಮೇತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳುವಂತೆ, ಇತ್ತೀಚೆಗೆ ಮಂಡಿಸಲಾದ ರಾಜ್ಯದ ಆಯವ್ಯಯ ಪತ್ರವೇ ಕರ್ನಾಟಕದ ಆರ್ಥಿಕ ಸ್ಥಿತಿಯ ಸಂಪೂರ್ಣ ಚಿತ್ರಣ ನೀಡುತ್ತದೆ. “ಇದು ಕೇವಲ ಅಂಕಿ-ಅಂಶಗಳ ಕಾಗದದ ಕಂತೆ ಅಲ್ಲ, ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ,” ಎಂದು ತಿಳಿಸಿದ್ದಾರೆ. ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿರುವ ಬಜೆಟ್‌ವೇ ನಮ್ಮ ಶ್ವೇತಪತ್ರ ಎಂದು ಸಿಎಂ ಸ್ಪಷ್ಟಪಡಿಸಿದ್ದು, ಇನ್ನೂ ಯಾವುದೇ ಅನುಮಾನಗಳಿದ್ದರೆ ವಿವರಿಸಲು ಸಿದ್ಧ ಎಂದು ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.