2026-06-08 01:23:24

CM Siddaramayya | ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ ಎಂದ ಸಿದ್ದರಾಮಯ್ಯ |Speed news kannada

CM Siddaramayya | ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ ಎಂದ ಸಿದ್ದರಾಮಯ್ಯ |Speed news kannada

ಕರ್ನಾಟಕ ಬಜೆಟ್ 2026 ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ರಾಹುಕಾಲ ನೋಡಿಕೊಂಡು ಬಜೆಟ್‌ ಮಂಡನೆ ಮಾಡ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌  ಟೀಕೆ ಮಾಡಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಉತ್ತರವನ್ನು ನೀಡಿದರು. ಈ ವಿಚಾರವಾಗಿ, ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುವ ವೇಳೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಅಧಿಕಾರಿಗಳು ಹಾಗೂ ಮನೆಯವರ ಮಾತು ಕೇಳಿ ರಾಹುಕಾಲ ನೋಡಿದ್ದು ನಿಜ. ಆದರೆ, ವೈಯಕ್ತಿಕವಾಗಿ ರಾಹುಕಾಲ, ಗುಳಿಕಕಾಲ ಅಥವಾ ಯಾವುದೇ ರೀತಿಯ ಗ್ರಹಣ ಕಾಲಗಳಲ್ಲಿ ನಂಬಿಕೆಯಿಲ್ಲ ಎಂದು ಹೇಳಿದರು.

ಈ ಹಿಂದೆ ಹಲವು ಬಾರಿ ರಾಹುಕಾಲದಲ್ಲೇ ಬಜೆಟ್ ಮಂಡಿಸಿದ್ದ ಉದಾಹರಣೆಗಳನ್ನೂ ಸಿದ್ದರಾಮಯ್ಯನವರು ನೀಡಿದ್ದಾರೆ. ಅಲ್ಲದೆ, ‘ಯುಗಾದಿ ದಿನ ಹಾಗೂ ಶಿವರಾತ್ರಿ ದಿನ ಯಾರಾದರೂ ಮಾಂಸ ಸೇವನೆ ಮಾಡುತ್ತಾರಾ?   ಎಂಬ ಪ್ರಶ್ನೆಗೆ ಹೌದು ನಾನು ತಿನ್ನುತ್ತೇನೆ, ನನ್ನಿಷ್ಟ’ ಎಂದು ಸಿದ್ದರಾಮಯ್ಯ ಉತ್ತರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.