2026-06-08 01:28:17

CM Vijay bows to opposition criticism | ವಿಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ ಜ್ಯೋತಿಷಿ ರಾಧನ್ ಪಂಡಿತ್ ನೇಮಕ ರದ್ದು | Speed News Kannada

CM Vijay bows to opposition criticism | ವಿಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ ಜ್ಯೋತಿಷಿ ರಾಧನ್ ಪಂಡಿತ್ ನೇಮಕ ರದ್ದು | Speed News Kannada

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್‌ಡಿ) ಜ್ಯೋತಿಷಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರ ನೇಮಕವನ್ನು ರದ್ದುಗೊಳಿಸಲಾಗಿದೆ.
ಸರ್ಕಾರದ ಮಿತ್ರಪಕ್ಷಗಳು ಮತ್ತು ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪಗಳು ಕೇಳಿ ಬಂದ ಬೆನ್ನಲ್ಲೇ ಸರ್ಕಾರ ನೇಮಕಾತಿಯನ್ನು ರದ್ದುಪಡಿಸಿದೆ.
ರಿಕಿ ರಾಧನ್‌ ಅವರು ವಿಜಯ್‌ ಅವರು ಮೂತಹಃ ಜ್ಯೋತಿಷಿಯಾಗಿದ್ದು, ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡುತ್ತಿದ್ದರು. ವಿಜಯ್‌ ಅವರಿಗೂ ಅವರು ಸಲಹೆಗಾರರಾಗಿದ್ದರು. ಹಾಗಾಗಿ ರಿಕಿ ಅವರನ್ನು ಒಎಸ್‌ಡಿಯಾಗಿ ನೇಮಿಸಲಾಗಿತ್ತು. ಈ ಜ್ಯೋತಿಷಿಯ ನೇಮಕವು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನವೇ ವಿಜಯ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು  ಭವಿಷ್ಯ ನುಡಿದಿದ್ದರು. ಕಾಂಗ್ರೆಸ್‌ ಸಂಸದ ಸಸಿಕಾಂತ ಸೆಂಥಿಲ್‌ ಅವರು ಜ್ಯೋತಿಷಿಗೆ ಒಎಸ್‌ಡಿ ಸ್ಥಾನ ಏಕೆ ಬೇಕು? ಯಾರಾದರೂ ವಿವರಿಸುತ್ತೀರಾ? ಎಂದು ಪ್ರಶ್ನಿಸಿದ್ದರು.
ರಿಕಿ ಪ್ರಭಾವಿ ರಾಜಕೀಯ ಮುಖಂಡರ ಜ್ಯೋತಿಷಿ ಎಂದು ಬಿಂಬಿಸಿಕೊಂಡಿದ್ದರು. ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಹಾಗೂ ಬಿಜೆಪಿ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೂ ಆಪ್ತರಾಗಿದ್ದರು ಎಂದು ಹೇಳಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.