2026-06-08 03:24:55

ಕಾಕ್ರೋಚ್‌ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್‌ ದೀಪ್ಕೆ ಭಾರತಕ್ಕೆ; ಉದ್ದೇಶವೇನು? |Speed News Kannada

ಕಾಕ್ರೋಚ್‌ ಜನತಾ ಪಾರ್ಟಿ ಸ್ಥಾಪಕ ಅಭಿಜೀತ್‌ ದೀಪ್ಕೆ ಭಾರತಕ್ಕೆ; ಉದ್ದೇಶವೇನು? |Speed News Kannada

ನವದೆಹಲಿ:ಸಾಮಾಜಿಕ ಜಾಲತಾಣಗಳಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಸ್ಥಾಪಿಸಿ ವಿಶ್ವದಾದ್ಯಂತ ಸಂಚಲನ ಮೂಡಿಸಿದ್ದ ಅಭಿಜೀತ್‌ ದೀಪ್ಕೆ ಜೂನ್‌ 6 ರಂದು ಭಾರತಕ್ಕೆ ಆಗಮಿಸಲಿದ್ದಾರೆ.

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಅವರು ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.

ಜೂನ್ 6ರ ಶನಿವಾರ ಬೆಳಿಗ್ಗೆ ದೆಹಲಿಗೆ ಬರಲಿದ್ದೇನೆ. ವಿಮಾನ ನಿಲ್ದಾಣದಲ್ಲೇ ಜಂತರ್‌ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟಿಸಲು ಅನುಮತಿ ಕೋರಲಿಕ್ಕಾಗಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಎಲ್ಲರೂ ಹೋಗೋಣ. ಆಸಕ್ತರು ನನ್ನ ಜತೆಗೂಡಬಹುದು ಎಂದು ಹೇಳಿದ್ದಾರೆ.

ನಾವೆಲ್ಲರೂ ಒಗ್ಗೂಡಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಧ್ವನಿ ಎತ್ತುವ ಸಮಯ  ಒದಗಿಬಂದಿದೆ. ಒಟ್ಟಿಗೆ ಧ್ವನಿ ಎತ್ತಿದರೆ ಖಂಡಿತವಾಗಿಯೂ ಸಚಿವರು ನಮ್ಮ ಮಾತನ್ನು ಕೇಳಬೇಕಾಗುತ್ತದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.