2026-06-25 02:37:03

Coffee farmer killed in wild elephant attack in Ponnampet|ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ|Speed News Kannada

Coffee farmer killed in wild elephant attack in Ponnampet|ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ|Speed News Kannada

ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಸಮೀಪದ ಕಾಯಿಮಾನಿಯಲ್ಲಿ ಇಂದು (ಏಪ್ರಿಲ್ 8) ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದ್ದು, ಅವರು ಕುರ್ಚಿ ಮತ್ತು ಕಾಯಿಮಾನಿ ನಡುವೆ ಇರುವ ತಮ್ಮ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಎದುರಾದ ಆನೆ ರತ್ತು ಅವರ ಮೇಲೆ ದಾಳಿ ನಡೆಸಿ ತುಳಿದು ಕೊಂದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಹಗಲು ಹೊತ್ತಿನಲ್ಲೇ ಸಂಚರಿಸುತ್ತಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಡಾನೆಗಳ ಹಾವಳಿಯಿಂದಾಗಿ ಬೆಳೆಗಾರರು ಮತ್ತು ಕಾರ್ಮಿಕರು ತೋಟದ ಕೆಲಸಕ್ಕೆ ತೆರಳಲು ಭಯಪಡುತ್ತಿದ್ದಾರೆ. ಅರಣ್ಯ ಇಲಾಖೆಯು ಕೂಡಲೇ ಎಚ್ಚೆತ್ತುಕೊಂಡು ಈ ಆನೆಗಳ ಹಿಂಡನ್ನು ಕಾಡಿಗಟ್ಟಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಒತ್ತಾಯಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.