2026-06-08 01:24:29

College student dies in wild elephant attack | ಕಾಲೇಜು ವಿದ್ಯಾರ್ಥಿನಿ ಸಾವು ಕಾಡಾನೆ ದಾಳಿ | Speed News Kannada

College student dies in wild elephant attack | ಕಾಲೇಜು ವಿದ್ಯಾರ್ಥಿನಿ ಸಾವು ಕಾಡಾನೆ ದಾಳಿ | Speed News Kannada

ಮಡಿಕೇರಿ : ಇತ್ತೀಚಿಗೆ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ. ಮಡಿಕೇರಿಯಲ್ಲಿ ಜನರು ಆತಂಕದಿಂದ ಬದುಕುವಂತಾಗಿದೆ.
ಮಡಿಕೇರಿ ತಾಲ್ಲೂಕಿನ ಕಾಡಂಚಿನ ಗ್ರಾಮ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ೧೭ ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿನಿ ಪೂಜಾ ಸಿಲುಕಿ ಮೃತಪಟ್ಟಿದ್ದಾರೆ. ಕಳೆದ 2 ವರ್ಷದ ಹಿಂದೆ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಇರಲಿಲ್ಲ. ವಿದ್ಯಾರ್ಥಿನಿಯ ಮನೆಯ 100 ಮೀಟರ್ ವ್ಯಾಪ್ತಿಯಲ್ಲಿ ಅರಣ್ಯ ಇದೆ. ಒಂಟಿ ಆನೆ ಈ ದಾಳಿ ನಡೆಸಿದೆ.
ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆತರುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಡಿಸಿಎಫ್ ಅಭಿಷೇಕ್ ಮಾಹಿತಿ ನೀಡಿದ್ದಾರೆ.
ಕಾಡಾನೆ ದಾಳಿ ತಡೆಯಲು ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಬೆಟ್ಟತ್ತೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಕಾಡಾನೆಯಿಂದ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.