2026-06-25 02:08:16

College Student Escapes kidnapping Attempt in Belthangady | ಬೆಳ್ತಂಗಡಿ ಬೆಳ್ಳಂಬೆಳಗ್ಗೆ ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ ಅಪಾಯದಿಂದ ಪಾರಾದ ಬಾಲಕಿ | Speed News Kannada

College Student Escapes kidnapping Attempt in Belthangady | ಬೆಳ್ತಂಗಡಿ ಬೆಳ್ಳಂಬೆಳಗ್ಗೆ ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ ಅಪಾಯದಿಂದ ಪಾರಾದ ಬಾಲಕಿ | Speed News Kannada

ದಕ್ಷಿಣ ಕನ್ನಡ:  ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ನಗರದ ಸುದೇಮುಗೇರು ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಸ್ಕೂಟರ್ ನಲ್ಲಿ ಸಂತೆ ಕಟ್ಟೆ ಬಸ್ ಹತ್ತಲು ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಾರನ್ನು ಸ್ಕೂಟರ್ ಗೆ ಅಡ್ಡಗಟ್ಟಿ, ವಿದ್ಯಾರ್ಥಿನಿಯನ್ನು  ಅಪಹರಿಸಲು ಪ್ರಯತ್ನ ನಡೆಸಿದ್ದಾರೆ. ಆಗ ಆ ವಿದ್ಯಾರ್ಥಿನಿ ಜೋರಾಗಿ ಕೂಗಿಕೊಂಡು ಪ್ರತಿರೋಧ ವ್ಯಕ್ತಪಡಿಸಿದ್ದಾಳೆ  ಅದೇ ಸಮಯಕ್ಕೆ ಇತರೆ ವಾಹನಗಳು ಬರುತ್ತಿದ್ದುದನ್ನು ಕಂಡ ಅಪಹರಣಕಾರರು ಬಾಲಕಿಯ ಕೈಗೆ ಚೂರಿಯಿಂದ ಚುಚ್ಚಿ ಪರಾರಿಯಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಪೊಲೀಸರು ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದು ತನಿಖೆ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.