2026-06-25 04:00:28

College student files complaint after being drugged and raped by friends | ಡ್ರಗ್ಸ್‌ ನೀಡಿ ಸ್ನೇಹಿತರಿಂದಲೇ ರೇಪ್ ಕಾಲೇಜು ವಿದ್ಯಾರ್ಥಿನಿ ದೂರು ದಾಖಲು | Speed News Kannaad

College student files complaint after being drugged and raped by friends | ಡ್ರಗ್ಸ್‌ ನೀಡಿ ಸ್ನೇಹಿತರಿಂದಲೇ ರೇಪ್ ಕಾಲೇಜು ವಿದ್ಯಾರ್ಥಿನಿ ದೂರು ದಾಖಲು | Speed News Kannaad

ಬೆಂಗಳೂರು: ನಗರದ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿ ತನ್ನ ಸ್ನೇಹಿತರ ವಿರುದ್ಧವೇ ಸಾಮೂಹಿಕ ಅತ್ಯಾಚಾರದ ದೂರು ನೀಡಿದ್ದಾರೆ.
ಅಚ್ಚರಿ ಎಂದರೆ ಈ ಹಿಂದೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಫೆ.21ರಂದು ಇದೇ ವಿದ್ಯಾರ್ಥಿನಿ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಯುವತಿ ತನ್ನದೇ ಸ್ನೇಹಿತರ ವಿರುದ್ಧ ಗ್ಯಾಂಗ್ ರೇಪ್ ದೂರು ದಾಖಲಿಸಿದ್ದಾಳೆ. ನಿಖಿಲ್ ಮತ್ತು ಡಿಕ್ಸನ್ ಸಾಂಡ್ರಾ ಎಂಬ ಇಬ್ಬರು ಸ್ನೇಹಿತರ ವಿರುದ್ಧ ದೂರು ದಾಖಲಿಸಲಾಗಿದೆ. 
ಬೆಂಗಳೂರಿನ ಜಕ್ಕೂರಿನಲ್ಲಿ ಈ ಘಟನೆ ನಡೆದಿದೆ. ಡ್ರಗ್ಸ್‌ ನೀಡಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ನನಗೆ ಗುಲಾಬಿ ಬಣ್ಣದ ಮಾತ್ರೆಯೊಂದನ್ನು ನೀಡಿದರು. ಆಗ ನಾನು  ಪ್ರಜ್ಞಾಹೀನ ಸ್ಥಿತಿಗೆ ಹೋದೆ. ಆ ಸಂದರ್ಭವನ್ನು ಬಳಸಿಕೊಂಡು ಅತ್ಯಚಾರ ಎಸಗಲಾಗಿದೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ದಾಖಲಾಗಿದೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದಾಳೆ. ಈ ಸಂಬಂಧ ಫೆ.22ರಂದು ಎಫ್ಐಆರ್ ದಾಖಲಾಗಿದೆ.
ಯುವತಿ ಆರೋಪವೇನು?
2026ರ ಜನವರಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಡಿಕ್ಸನ್ ಸಾಂಡ್ರಾ ಎಂಬಾತನ ಪರಿಚಯವಾಗಿತ್ತು. ಪರಿಚಯ ಪ್ರೀತಿಗೆ ತಿರುಗಿತ್ತು. ಬಳಿಕ ಇಬ್ಬರೂ ಹಲವು ಬಾರಿ ಭೇಟಿ ಆಗಿದ್ದೆವು. ಫೆಬ್ರವರಿ 14ರಂದು ಕರೆ ಮಾಡಿದ್ದ ಡಿಕ್ಸನ್, ಜಕ್ಕೂರಿನಲ್ಲಿರುವ ವಿಲ್ಲಾವೊಂದಕ್ಕೆ ಪಾರ್ಟಿಗೆ ಬರುವಂತೆ ಆಹ್ವಾನ ನೀಡಿದ್ದ. ಗೆಳತಿಯ ಜತೆ ಮಧ್ಯರಾತ್ರಿ ಸುಮಾರು 1.15ಕ್ಕೆ ವಿಲ್ಲಾಗೆ ತೆರಳಿದ್ದೆ. ಅಲ್ಲಿ ಡಿಕ್ಸನ್ ಆತನ ಗೆಳೆಯ ಎಂದು ನಿಖಿಲ್ ಎಂಬಾತನನ್ನು ಪರಿಚಯಿಸಿದ್ದ. ಇಬ್ಬರೂ ಬಲವಂತವಾಗಿ ಮಾತ್ರೆಯನ್ನು ತಿನ್ನಿಸಿದ್ದಾರೆ. ಈ ವೇಳೆ ಕಣ್ಣುಗಳು ಮಂಜಾಗಿ ನಾನು ಪ್ರಜ್ಞಾಹೀನಳಾದೆ. ಕೂಡಲೇ ಡಿಕ್ಸನ್ ರೂಮಿಗೆ ಕರೆದೊಯ್ದು ತನ್ನ ಮಲಗಿಸಿದ್ದ. ಆದಾದ ನಂತರ ನನಗೆ ಪ್ರಜ್ಞೆತಪ್ಪಿದೆ. ನನಗೆ ಎಚ್ಚರವಾದಾಗ ಪಕ್ಕದಲ್ಲಿ ನಿಖಿಲ್ ಇರುವುದನ್ನು ಕಂಡು ಬೆಚ್ಚಿಬಿದ್ದಿದ್ದೆ ಎಂದು ಆಪಾದಿಸಿದ್ದಾಳೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದಾಗ ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.