2026-07-01 11:56:32

Commercial LPG | ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಇಳಿಕೆ ಇಂದಿನಿಂದಲೇ ಪರಿಷ್ಕೃತ ದರ ಜಾರಿ | SNK

Commercial LPG | ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಇಳಿಕೆ ಇಂದಿನಿಂದಲೇ ಪರಿಷ್ಕೃತ ದರ ಜಾರಿ | SNK

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ವಾಣಿಜ್ಯ ಬಳಕೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 19 ಕೆಜಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆಯಾಗಿದ್ದು, ಬುಧವಾರ (ಜು.01)ದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ. ಈ ನಿರ್ಧಾರವು ವಿಶೇಷವಾಗಿ ಆಹಾರ ಮಳಿಗೆಗಳು ಮತ್ತು ಧಾಬಾ ಮಾಲೀಕರು ಸೇರಿದಂತೆ ಸಣ್ಣ ವ್ಯವಹಾರಗಳಿಗೆ ಅನುಕೂಲವಾಗುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆಯಲ್ಲಿ 183.50 ರೂಪಾಯಿ ಇಳಿಕೆಯಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 19ಕೆಜಿಯ ವಾಣಿಜ್ಯ ಸಿಲಿಂಡರ್‌ ಬೆಲೆ 3,113.50 ರೂಪಾಯಿಗೆ ಏರಿಕೆಯಾಗಿದ್ದು, ಇದೀಗ 2,930 ರೂಪಾಯಿಗೆ ಇಳಿಕೆಯಾಗಿದೆ. ಆದರೆ ಗೃಹ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ ಯಥಾಸ್ಥಿತಿಯಲ್ಲಿದೆ. ಗೃಹ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಬೆಲೆ 913 ರೂಪಾಯಿಯಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಇಳಿಕೆಯನ್ನು ಹೋಟೆಲ್‌ ಮಾಲೀಕರ ಸಂಘ, ರೆಸ್ಟೋರೆಂಟ್ಸ್‌ ಹಾಗೂ ಕೆಟರಿಂಗ್‌ ಸರ್ವೀಸಸ್‌ ಸ್ವಾಗತಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.